ಹೊನ್ನಾಳಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.3ರ ಸೋಮವಾರ ಹೊನ್ನಾಳಿ ಬಂದ್ ನಡೆಸಿ ಪ್ರತಿಭಟನೆ ನಡೆಸಲಾಗಿದ್ದು,ಈ ವೇಳೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರನ್ನು ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಮರಳು ವಿತರಣೆ ಸೇರಿದಂತೆ ವಿವಿಧ
ಬೇಡಿಕೆಗಳಿಗೆ ಆಗ್ರಹಿಸಿ ಶಾಸಕ ರೇಣುಕಾಚಾರ್ಯ ನೇತೃತ್ವದಲ್ಲಿ ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರು.
ಈ ವೇಳೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದು,ಪೊಲೀಸರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಪೊಲೀಸರು ಮತ್ತು ರೇಣುಕಾಚಾರ್ಯ ಅವರ ನಡುವೆ ತೀವ್ರ ವಾಗ್ವಾದ ನಡೆದಿದೆ.
ಸಾರ್ವನಿಕರಿಗೆ ಕಿರುಕುಳ ನೀಡಿದ ಆರೋಪದಲ್ಲಿ 10 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.
ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳನ್ನು ಬರಗಾಲ ಪಟ್ಟಿಗೆ ಸೇರ್ಪಡೆ, ಭತ್ತ-ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪನೆ, ರೈತರ ಸಂಪೂರ್ಣ ಸಾಲಮನ್ನಾ, ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಕಳೆದ ಶನಿವಾರ ನ್ಯಾಮತಿ ಬಂದ್ ನಡೆಸಿದ್ದರು.