ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ (MLA Muniratna) ಅವರಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಂಗಳವಾರ (ಅ.15) ಜಾಮೀನು ಮಂಜೂರು ಮಾಡಿದೆ.
ಪ್ರಕಣದಲ್ಲಿ ಮೂವರಿಗೆ ಸೋಮವಾರ ನಿರೀಕ್ಷಣ ಜಾಮೀನು ಮಂಜೂರು ಮಾಡಿತ್ತು. 4ನೇ ಆರೋಪಿಯಾಗಿರುವ ಕಿರಣ್ ಕುಮಾರ್, ಆತನ ಸ್ನೇಹಿತರಾದ ಎ5 ಲೋಹಿತ್ ಕುಮಾರ್, ಎ6 ಮಂಜುನಾಥ್‌ಗೆ ಜಾಮೀನು ಮಂಜೂರಾಗಿತ್ತು. ತನಿಖೆಗೆ ಸಹಕಾರ ನೀಡಬೇಕು ಎಂದು ಕೋರ್ಟ್ ಷರತ್ತು ವಿಧಿಸಿತ್ತು.
ಶಾಸಕ ಮುನಿರತ್ನ ವಿರುದ್ಧ ಹನಿಟ್ರ್ಯಾಪ್, ಅತ್ಯಾಚಾರ ಆರೋಪ ಮಾಡಲಾಗಿತ್ತು. ಪ್ರಕರಣದ ತನಿಖೆ ವಿಶೇಷ ತನಿಖಾ ತಂಡ (SIT) ನಡೆಸುತ್ತಿತ್ತು. ಪ್ರಕರಣದಲ್ಲಿ ಮುನಿರತ್ನ ಎ1 ಆರೋಪಿಯಾಗಿದ್ದರು.
ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಮೂಲದ ಮಹಿಳೆಯೊಬ್ಬರು ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದರು. ಹೀಗಾಗಿ, ಮುನಿರತ್ನ ವಿರುದ್ಧ ರಾಮನಗರ ಕಗ್ಗಲಿಪುರ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯು ಕಗ್ಗಲೀಪುರದ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಮುನಿರತ್ನ ವಿರುದ್ಧ ದೂರು ನೀಡಿದ್ದರು. ಹೀಗಾಗಿ ಮುನಿರತ್ನ ಸೇರಿ ಒಟ್ಟು 7 ಜನರ ವಿರುದ್ಧ ಕೇಸ್ ದಾಖಲಿಸಿಕೊಳ್ಳಲಾಗಿತ್ತು. ವಿವಿಧ ಸೆಕ್ಷನ್‌ಗಳಡಿ ದೂರು ದಾಖಲಾಗಿದೆ. ಬಿಎನ್ಎಸ್ 354ಎ, 354 ಸಿ, 376, 506, 504, 120(ಬಿ), 149, 384, 406, 308 ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.