ಸ್ಥಳದಲ್ಲಿ ಸ್ವಲ್ಪಹೊತ್ತು ಗೊಂದಲ ನೆಲೆಸಿತ್ತು.ಶಾಸಕರ ಕಾರನ್ನು ಕಂಡು ಕಾರ್ಯಕರ್ತರು ಅವರ ವಿರುದ್ಧ ಘೋಷಣೆ ಕೂಗಿದ್ದಲ್ಲದೆ ಕೆಲವರು ಕಾರಿನತ್ತ ಧಾವಿಸಿದರು. ಕ್ರುದ್ಧರಾದ ಶಾಸಕರು ಕಾರಿನಿಂದ ಇಳಿದು ಬಂದರು. ಸ್ಥಳದಲ್ಲಿದ್ದ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಹಾಗೂ ಪೊಲೀಸ್‌ಅಧಿಕಾರಿಗಳು ಪರಿಸ್ಥಿತಿಯನ್ನು ತಿಳಿ ಗೊಳಿಸಲು ಪ್ರಯತ್ನಿಸಿದರು. ರಸ್ತೆಯಲ್ಲಿ ಧರಣಿ ನಡೆಸಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಮಾಡುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳ ಜತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಮತ್ ಸರಕಾರ ಹಾಗೂ ಅಧಿಕಾರಿಗಳು ಬಂದ್ ಮಾಡುವವರಿಗೆ ಸಹಕಾರ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಬಳಿಕ ಪೊಲೀಸರು ಧರಣಿನಿರತನ್ನು ಸ್ಥಳದಿಂದ ತೆರವುಗೊಳಿಸಿದರು.
Advertisement
ಬಲವಂತದ ಬಂದ್ಮಾಧ್ಯಮದವರೊಂದಿಗೆ ಮಾತನಾಡಿದ ವೇದವ್ಯಾಸ ಕಾಮತ್, ಇದು ಸ್ವಯಂಪ್ರೇರಿತ ಅಲ್ಲ; ಬಲವಂತದ ಬಂದ್. ರಾಜ್ಯದ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರ ಅಧಿಕಾರವನ್ನು ದುರುಪಯೋಗ ಮಾಡುತ್ತಿದೆ ಎಂದು ಆರೋಪಿಸಿದರು. ಸಾರ್ವಜನಿಕರ ಹಿತದ ಬದಲು ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಟ್ಟುಕೊಂಡು ಕಾಂಗ್ರೆಸ್ ಮತ್ತು ಇತರರು ಈ ಬಂದ್‌ಗೆ ಕರೆ ನೀಡಿದ್ದಾರೆ ಎಂದರು.