ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೆ ಕೆಲವರು ಶಾಸಕರು ಅಸಮಾಧಾನಗೊಂಡಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲು ಒತ್ತಡ ಹಾಕಿದ್ದಾರೆ.
ಇಂದು ವಿಧಾನಸೌಧದಲ್ಲಿ ರೇಣುಕಾಚಾರ್ಯ ನೇತೃತ್ವದಲ್ಲಿ ಸಭೆ ನಡೆಸಿದ 20ಕ್ಕೂ ಹೆಚ್ಚು ಬಿಜೆಪಿ ಶಾಸಕರು, ಶಾಸಕಾಂಗ ಪಕ್ಷದ ಸಭೆ ಕರೆಯಲು ಸಿಎಂ ಗೆ ಮನವಿ ಮಾಡಿದ್ದಾರೆ. ಇಂದು ಸಂಜೆ ಅಧಿಕೃತ ನಿವಾಸಕ್ಕೆ ಬರುವಂತೆ ಶಾಸಕರಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗಳ ಬಗ್ಗೆ ಸಭೆಯಲ್ಲಿ ಕೆಲವು ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು. ಪಕ್ಷಕ್ಕೆ ಮುಜುಗರ ಆಗುವಂತೆ ಹೇಳಿಕೆ ನೀಡುತ್ತಿರುವ ಯತ್ನಾಳ್ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ಈ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರಿಗೆ ಪತ್ರ ಬರೆಯಲು ತಿರ್ಮಾನ ಮಾಡಲಾಗಿದೆ.
ಇದನ್ನೂ ಓದಿ:ಕೋವಿಡ್ ಕೆಲಸ ಮಾಡುವವರಿಗೆ ಇಂದಿನಿಂದ 50 ದಿನಗಳವರೆಗೆ ರಜೆ ಇಲ್ಲ: ಸಚಿವ ಸುಧಾಕರ್
ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಅನುದಾನ ಸಿಗದ ಕಾರಣ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗೆ ಹೋಗಲು ಆಗದ ಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಿಗೆ ಅನುದಾನವೇ ಕೊಟ್ಟಿಲ್ಲ ಎಂದು ಶಾಸಕರು ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಚಿವರ ಕಾರ್ಯವೈಖರಿ ಬಗ್ಗೆ ಶಾಸಕರಿಂದ ಮತ್ತೆ ಅಸಮಾಧಾನ ಕೇಳಿಬಂದಿದೆ. ಉಪ ಚುನಾವಣೆ ವಿಚಾರದ ಬಗ್ಗೆಯೂ ಚರ್ಚಿಸಲು ಶಾಸಕಾಂಗ ಸಭೆಗ ಕರೆಯಲು ಆಗ್ರಹಿಸಿದ್ದಾರೆ. ಸದ್ಯ ಸಿಎಂ ಇಂದು ಸಂಜೆ ಅಧಿಕೃತ ನಿವಾಸಕ್ಕೆ ಬರುವಂತೆ ಈ ಶಾಸಕರಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಜಾರಕಿಹೊಳಿಯವರಿಂದ ಅನ್ಯಾಯವಾಗಿದೆ, ನ್ಯಾಯ ಕೊಡಿಸಿ ಎಂದು ಯುವತಿ ಕೇಳಿದ್ದಳು: CD ಶಂಕಿತ ನರೇಶ್