Advertisement
ಗುಳೇದಗುಡ್ಡದಲ್ಲಿ ಮಾತನಾಡಿ, ಬಿಜೆಪಿಯವರು ಹೇಗಾದರೂ ಮಾಡಿ ರಾಜ್ಯದಲ್ಲಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬರಬೇಕೆಂದು ಕುತಂತ್ರ ನಡೆಸಿದ್ದಾರೆ. ಇಂತಹ ಕುತಂತ್ರದಿಂದ ಈಗಾಗಲೇ ಒಂದು ಬಾರಿ ಮುಖಭಂಗ ಅನುಭವಿಸಿದ್ದಾರೆ. ಮತ್ತೆ ಪ್ರಯತ್ನಿಸಿದರೆ ಮುಖಭಂಗ ಅನುಭವಿಸಲಿದ್ದಾರೆ. ಕಾಂಗ್ರೆಸ್‌ನ ಯಾವ ಶಾಸಕರೂ ಬಿಜೆಪಿ ಸಂಪರ್ಕದಲ್ಲಿಲ್ಲ. ಹೀಗೆ ಹೇಳಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬರಲು ಹೋದ ಯಡಿಯೂರಪ್ಪ ಎಷ್ಟು ದಿನ ಸಿಎಂ ಆಗಿದ್ರು? ಸತ್ಯ ಹೇಳಬೇಕು ಅಂದ್ರೆ ಬಿಜೆಪಿಯ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದರು.
Related Articles
ಬಳಿಕ ಹುಬ್ಬಳ್ಳಿಯಲ್ಲಿ ಮಾತನಾಡಿ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಆಯಾ ಸ್ಥಳೀಯ ನಾಯಕರಿಗೆ ಬಿಟ್ಟ ವಿಚಾರ. ಈ ಬಗ್ಗೆ ರಾಜ್ಯಮಟ್ಟದಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆದರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮುಂದುವರಿಯಲಿದೆ. ಶಾದಿಭಾಗ್ಯ ಅನುದಾನ ಕಡಿತಗೊಳಿಸಿರುವ ರಾಜ್ಯ ಸರ್ಕಾರದ ಕ್ರಮದ ಬಗ್ಗೆ ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ. ಮೈತ್ರಿ ಧರ್ಮ ಕಾಪಾಡಬೇಕಾಗಿರುವುದು ಎಲ್ಲರ ಜವಾಬ್ದಾರಿ. ಈ ಕುರಿತು ಸಮನ್ವಯ ಸಮಿತಿಯಲ್ಲಿ ಚರ್ಚಿಸುವುದಾಗಿ ತಿಳಿಸಿದರು.
Advertisement