ಬೆಂಗಳೂರು: ಪಕ್ಷದ 10 ಶಾಸಕರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಬುಧವಾರ ಸಂಜೆ ವಿಧಾನಸಭೆಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ಶಾಸಕರನ್ನು ವಶಕ್ಕೆ ಪಡೆದು ವಿಧಾನಸೌಧ ಠಾಣೆಗೆ ಕರೆದೊಯ್ಯಲಾಯಿತು.
ಪ್ರತಿಭಟನೆಯ ವೇಳೆ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕೂಡ ಬಿಜೆಪಿ ನಾಯಕರೊಂದಿಗೆ ಬಂದು ಕುಳಿತಿದ್ದರು.
ಇದನ್ನೂ ಓದಿ: BJP ಪ್ರತಿಭಟನೆ ವೇಳೆ ಅಸ್ವಸ್ಥ ;ಆಸ್ಪತ್ರೆಗೆ ದಾಖಲಾದ ಶಾಸಕ ಯತ್ನಾಳ್
ಬೊಮ್ಮಾಯಿ ಅವರು ಮಾತನಾಡಿ ಇದು ಕಾನೂನುಬಾಹಿರ ಮತ್ತು ಪ್ರಜಾಪ್ರಭುತ್ವದ ಕೊಲೆ. ಸಿದ್ದರಾಮಯ್ಯ ಸರಕಾರ ಸರ್ವಾಧಿಕಾರಿ ಧೋರಣೆ ಅನುಸರಿಸಿ ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದೆ. ನಾವು ಸಮಸ್ಯೆಯನ್ನು ಜನರ ಬಳಿಗೆ ಕೊಂಡೊಯ್ಯುತ್ತೇವೆ” ಎಂದು ಆಕ್ರೋಶ ಹೊರ ಹಾಕಿದರು.
ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ನೇತೃತ್ವದ ವಿಪಕ್ಷ ನಾಯಕರ ಸಭೆಗೆ ಐಎಎಸ್ ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆಯ ನಡುವೆ ಈ ಘಟನಾವಳಿಗಳು ನಡೆದಿವೆ. ಜುಲೈ ಮೂರರಂದು ಆರಂಭಗೊಂಡಿದ್ದ ವಿಧಾನಸಭೆ ಕಲಾಪ ಜುಲೈ 21ಕ್ಕೆ ಮುಕ್ತಾಯವಾಗಲಿದೆ.