Advertisement

ಟಿಪ್ಪು ಜಯಂತಿಯಲ್ಲಿ ಭಾಗಿಯಾದ ಬಿಜೆಪಿ ಶಾಸಕರು…!!

12:32 PM Nov 10, 2017 | Team Udayavani |

ಬೆಂಗಳೂರು: ರಾಜ್ಯಾದ್ಯಂತ ಶುಕ್ರವಾರ ಟಿಪ್ಪು ಸುಲ್ತಾನ್‌ ಜಯಂತಿಯನ್ನು ಸರಕಾರಿ ಕಾರ್ಯಕ್ರಮವನ್ನಾಗಿ  ಆಚರಿಸಲಾಗುತ್ತಿದ್ದು ಬಿಜೆಪಿ ತೀವ್ರ ವಿರೋಧ ವ್ಯಕ್ತ ಪಡಿಸಿ ಪ್ರತಿಭಟನೆನಡೆಸುತ್ತಿದೆ. ಆದರೆ ಇಬ್ಬರು ಶಾಸಕರು ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಾರ್ಯಕರ್ತರ ಆಕ್ರೋಶಕ್ಕೆ ಗುರಿಯಾಗಿದ್ದು,ಗೊಂದಲಕ್ಕೆ ಕಾರಣವಾಗಿದ್ದಾರೆ.

Advertisement

ಬೊಮ್ಮನಹಳ್ಳಿ ಯಲ್ಲಿ  ಬಿಜೆಪಿ  ಶಾಸಕ ಎಂ. ಸತೀಶ್‌ ರೆಡ್ಡಿ ಅವರು ಟಿಪ್ಪು ಜಯಂತಿಗೆ ಶುಭಕೋರಿ ಮುಸ್ಲಿಂ ಟೋಪಿ ಧರಿಸಿರುವ  ಭಾವ ಚಿತ್ರವುಳ್ಳ ಫ್ಲೆಕ್ಸ್‌ಗಳು ಕಾಣಿಸಿಕೊಂಡಿವೆ. ಅವರ ಕೆಲ ಬೆಂಬಲಿಗರ ಫೋಟೋಗಳು ಫ್ಲೆಕ್ಸ್‌ಗಳಲ್ಲಿದ್ದು ಇದೀಗ ವೈರಲ್‌ ಆಗಿವೆ.

‘ಗೊಂದಲ ಮೂಡಿಸವ ನಿಟ್ಟಿನಲ್ಲಿ ವಿರೋಧಿಗಳು ಈ ಫ್ಲೆಕ್ಸ್‌ ಹಾಕಿದ್ದಾರೆ. ನಾನು ಪೊಲೀಸರು ಮತ್ತು ಬಿಬಿಎಂಪಿಗೆ ತಿಳಿಸಿ ಫ್ಲೆಕ್ಸ್‌ ತೆರವುಗೊಳಿಸಿದ್ದೇನೆ’ ಎಂದು ಸತೀಶ್‌ ರೆಡ್ಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದೇ ವೇಳೆ ‘ನಾನು ವೋಟ್‌ಬ್ಯಾಂಕ್‌ ರಾಜಕಾರಣ ಮಾಡುವವನಲ್ಲ. ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ಪಕ್ಷದ ಸಿದ್ಧಾಂತದಲ್ಲಿ ನಡೆಯುತ್ತೇನೆ’ ಎಂದಿದ್ದಾರೆ. 

ಆನಂದ್‌ ಸಿಂಗ್‌ ಭಾಗಿ; ಸಮರ್ಥನೆ 

ಇನ್ನೊಂದೆಡೆ ವಿಜಯನಗರ ಬಿಜೆಪಿ ಶಾಸಕ ಆನಂದ್‌ ಸಿಂಗ್‌ ಅವರು ನಗರ ಸಭೆಯ ಆವರಣದಲ್ಲಿ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ  ದೀಪ ಬೆಳಗಿಸಿ ಟಿಪ್ಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

Advertisement

ಈ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಆನಂದ್‌ ಸಿಂಗ್‌ ‘ನಾನು ಎಲ್ಲಾ ಧರ್ಮದವರನ್ನು ಗೌರವಿಸುತ್ತೇನೆ. ಮುಸ್ಲಿಂ ಬಾಂಧವರ ಭಾವನೆಗಳಿಗೆ ಧಕ್ಕೆಯಾಗಬಾರದು. ಎಲ್ಲಾ ಜಯಂತಿಗಳಲ್ಲೂ ನಾನು ಪಾಲ್ಗೊಂಡಿದ್ದೇನೆ. ಅಂತೆಯೇ ಅನಾರೋಗ್ಯದ ಹೊರತಾಗಿಯೂ ಭಾಗಿಯಾಗಿದ್ದೇನೆ. ಕೃಷ್ಣ ದೇವರಾಯರ ಕಾಲದಿಂದಲೂ ಇಲ್ಲಿ ಸಮಾನತೆ ಇದೆ.ಈ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ’ ಎಂದಿದ್ದಾರೆ. 

ಕಳೆದ ಕೆಲ ವರ್ಷಗಳಿಂದಲೂ ಮುಸ್ಲಿಂ ಸಂಘಟನೆಗಳು ನಡೆಸುತ್ತಿರುವ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಆನಂದ್‌ ಸಿಂಗ್‌ ಭಾಗಿಯಾಗುತ್ತಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next