ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಹೈಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಬಿಜೆಪಿಯ ಸಚಿವರು, ಬೆಂಗಳೂರಿನ ಶಾಸಕರ ಸಭೆ ನಡೆಯಿತು.
ಕುಮಾರಕೃಪಾ ಅತಿಥಿಗೃಹದಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ, ಸಚಿವರಾದ ಎಸ್.ಟಿ. ಸೋಮಶೇಖರ, ಕೆ. ಗೋಪಾಲಯ್ಯ, ಶಾಸಕರಾದ ಸತೀಶ್ ರೆಡ್ಡಿ, ಮುನಿರತ್ನ, ರವಿ ಸುಬ್ರಮಣ್ಯ ಭಾಗಿಯಾಗಿದ್ದರು.
ಈ ಬಗ್ಗೆ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್, ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ಸಭೆ ಸೇರಿದ್ದೆವು. ಆದರೆ ಇಂದಿನ ಸಭೆ ಅಪೂರ್ಣ ಆಗಿದೆ. ಸಚಿವ ಅಶೋಕ್, ಎಸ್.ಆರ್. ವಿಶ್ವನಾಥ್, ಅರವಿಂದ ಲಿಂಬಾವಳಿ ಅವರೆಲ್ಲಾ ಭಾಗವಹಿಸಿದ ಕಾರಣ ಸಭೆ ಪೂರ್ಣವಾಗಿಲ್ಲ ಎಂದರು.
ಇದನ್ನೂ ಓದಿ:ಕಣ್ಣೀರು ಸುರಿಸೋದು ದೇವೇಗೌಡರ ಮನೆತನದ ಸಂಸ್ಕೃತಿ: ಸಿದ್ದರಾಮಯ್ಯ ವ್ಯಂಗ್ಯ
ಸೋಮವಾರ ಅಧಿವೇಶನ ನಡೆಯುವ ವೇಳೆ ಎಲ್ಲರೂ ಸೇರಿ ಮತ್ತೆ ಚರ್ಚೆ ಮಾಡುತ್ತೇವೆ ಎಂದ ಅವರು, ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾರೂ ಹೇಳಿಕೆ ನೀಡಬಾರದು, ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನಿನ್ನೆ ವರಿಷ್ಠರು ಹೇಳಿದ್ದಾರೆ. ಹಾಗಾಗಿ ಆ ಬಗ್ಗೆ ಏನೂ ಪ್ರತಿಕ್ರಿಯಿಸುವುದಿಲ್ಲ ಎಂದರು.