Advertisement

BJP ಸಂಸದ ರಮೇಶ ಜಿಗಜಿಣಗಿ ಮೆದುಳಿನಲ್ಲಿ ರಕ್ತಸ್ರಾವ ; ಆಸ್ಪತ್ರೆಯಲ್ಲಿ ಚಿಕಿತ್ಸೆ

12:30 PM Mar 03, 2024 | Team Udayavani |

ಬೆಳಗಾವಿ: ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸದ್ಯ ಅವರನ್ನು ಬೆಳಗಾವಿಯ ಕೆ ಎಲ್ ಇ ಆಸ್ಪತ್ರೆ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಮೆದುಳಿನಲ್ಲಿ ರಕ್ತಸ್ರಾವ ಆಗಿದ್ದು, ಕೆಎಲ್ ಇ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಈಗ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

71 ರ ಹರೆಯದ ರಮೇಶ ಜಿಗಜಿಣಗಿ ಅವರು ಮತ್ತೆ ವಿಜಯಪುರ ಮೀಸಲು ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಕೆಲ ದಿನಗಳ ಹಿಂದೆ ಹೇಳಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next