Advertisement

ಪಶ್ಚಿಮ ಬಂಗಾಳದಲ್ಲಿ ಬದುಕಲು ಸಾಧ್ಯವಿಲ್ಲ: ರಾಜ್ಯಸಭೆಯಲ್ಲಿ ಕಣ್ಣೀರಿಟ್ಟ ಸಂಸದೆ

02:20 PM Mar 25, 2022 | Team Udayavani |

ನವದೆಹಲಿ : ಬಿರ್ಭೂಮ್ ಘಟನೆಗೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಮಮತಾ ಬ್ಯಾನರ್ಜಿ ಆಡಳಿತದ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಬಿಜೆಪಿ ಸಂಸದೆ ರೂಪಾ ಗಂಗೂಲಿ ಕಣ್ಣೀರಿಟ್ಟಿದ್ದಾರೆ.

Advertisement

ಬಿರ್ ಭೂಮ್ ಹಿಂಸಾಚಾರದ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತಿದ ರೂಪಾ ಗಂಗೂಲಿ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿದರು,

ಬಂಗಾಳದಲ್ಲಿ ಸಾಮೂಹಿಕ ಹತ್ಯೆಗಳು ನಡೆಯುತ್ತಿವೆ, ಜನರು ಭಯದಿಂದ ರಾಜ್ಯದಿಂದ ಪಲಾಯನ ಮಾಡುತ್ತಿದ್ದಾರೆ. ಅಲ್ಲಿ ಇನ್ನು ಮುಂದೆ ಜನರು ಬದುಕಲು ಯೋಗ್ಯವಾದ ವಾತಾವರಣ ಇಲ್ಲ ಎಂದು ಕಣ್ಣೇರು ಹಾಕಿದ್ದಾರೆ.

ಬೊಗ್ಟುಯಿ ಗ್ರಾಮದಲ್ಲಿ ಮಾರ್ಚ್ 21 ರಂದು ಸಂಜೆ ಸ್ಥಳೀಯ ಟಿಎಂಸಿ ನಾಯಕನ ಹತ್ಯೆಯ ಬಳಿಕ ಹಿಂಸಾಚಾರ ಭುಗಿಲೆದ್ದು, ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರನ್ನು ಸಜೀವ ದಹನ ಮಾಡಿ ಹತ್ಯಾಕಾಂಡ ನಡೆಸಲಾಗಿತ್ತು.ಘಟನಾ ಸ್ಥಳಕ್ಕೆ ಸಿಎಂ ಮಮತಾ ಬ್ಯಾನರ್ಜಿ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸ್ವತಂತ್ರ ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next