Advertisement
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣ ವನ್ನು ಬಿಜೆಪಿ(BJP) ಗಂಭೀರವಾಗಿ ಪರಿಗಣಿಸಿದ್ದು, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ. ಇದೇ ಶುಕ್ರವಾರ ನಾನು, ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಡಿಸಿಎಂ ಡಾ| ಅಶ್ವತ್ಥ ನಾರಾಯಣ, ಬಿಜೆಪಿ ಎಲ್ಲ ಶಾಸಕರು, ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಸದನದ ಒಳಗೂ ಉಗ್ರ ಹೋರಾಟ ನಡೆಸುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಖ ವಾಡ ಕಳಚಿ ಬಿದ್ದಿದ್ದು, ತತ್‌ಕ್ಷಣ ಹುದ್ದೆಗೆ ರಾಜೀನಾಮೆ ನೀಡ ಬೇಕು ಎಂದರು.
ಮಹದೇವಪ್ಪನ ಹೆಂಡತಿಗೂ ಫ್ರೀ, ಕಾಕಾ ಪಾಟೀಲ್ ಹೆಂಡ್ತಿಗೂ ಫ್ರೀ ಎಂದು ಚುನಾವಣೆಗೆ ಮುನ್ನ ಘೋಷಣೆ ಮಾಡಿದ್ದ ಸಿದ್ದರಾಮಯ್ಯ(Siddaramaiah) ಈಗ ತಮ್ಮ ಹೆಂಡತಿಗೆ ಮಾತ್ರ ಮುಡಾ ಸೈಟ್ ಕೊಟ್ಟಿದ್ದಾರೆ. ಎಸ್‌ಐಟಿ ಮಾಡಿ ತನಿಖೆ ನೆಪದಲ್ಲಿ ಈ ಪ್ರಕರಣವನ್ನು ಮುಚ್ಚಿ ಹಾಕುವುದು ಸೂಕ್ತವಲ್ಲ. ಈ ಭಾರೀ ಮೊತ್ತದ ಹಗರಣದ ತನಿಖೆಯನ್ನು ತತ್‌ಕ್ಷಣವೇ ಸಿಬಿಐಗೆ ಕೊಡಬೇಕು. 2004ರಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮನವರ ಅಣ್ಣ ಮಲ್ಲಿಕಾರ್ಜುನ ಸ್ವಾಮಿ ಈ ಜಮೀನು ಖರೀದಿ ಮಾಡಿದ್ದಾರೆ. ಮುಡಾ ಸ್ವಾಧೀನದಲ್ಲಿದ್ದ ಜಾಗವನ್ನು ಅವರು ಖರೀದಿಸಿದ್ದು ಹೇಗೆ? 2009- 10ರಲ್ಲಿ ಗಿಫ್ಟ್ ಡೀಡ್ ಆದಾಗಲೂ ಮುಡಾ ಹೆಸರು ಪಹಣಿಯಲ್ಲಿ ನಮೂದಾಗಿತ್ತು. ಸಿದ್ದರಾಮಯ್ಯ ಹೇಳುವಂತೆ ಅದು ಕೃಷಿ ಭೂಮಿಯಾಗಿರಲಿಲ್ಲ. ಈ ವಿಚಾರ ದಲ್ಲೂ ತಪ್ಪು ಮಾಹಿತಿ ನೀಡಿದ್ದಾರೆ.
Related Articles
Advertisement
ಇದು ಸಂಪೂರ್ಣ ಕಾನೂನುಬಾಹಿರ.ತಮ್ಮ ಅವಧಿಯಲ್ಲಿ ಅವ್ಯವಹಾರ ನಡೆಸಿ, ತಾವೇ ಪರಿಹಾರ ಕೇಳಿರುವ ರಾಜ್ಯದ ಮೊದಲ ಮುಖ್ಯಮಂತ್ರಿ ಸಿದ್ದರಾಮಯ್ಯ. ಅದರ ಬೆಲೆ 62 ಕೋಟಿ ರೂ. ಬರಬೇಕಿದ್ದು, 18 ಕೋಟಿ ರೂ. ನಿವೇಶನ ಪಡೆದಿದ್ದಾಗಿ ಹೇಳಿದ್ದಾರೆ. ಆದರೆ ಮುಖ್ಯಮಂತ್ರಿಗಳು 2013ರ ಚುನಾವಣೆಯ ಅಫಿದವಿತ್‌ನಲ್ಲಿ 3.16 ಎಕರೆ ಭೂಮಿಯನ್ನು ಉಲ್ಲೇಖಿಸಿಲ್ಲ. ಇದು ಚುನಾವಣೆ ನಿಯಮಗಳ ಉಲ್ಲಂಘನೆ. ಇದೆಲ್ಲವನ್ನೂ ಪರಿಶೀಲಿಸಿ ಚುನಾವಣ ಆಯೋಗಕ್ಕೆ ದೂರು ಕೊಡುವ ಕುರಿತು ನಿರ್ಧರಿಸುತ್ತೇವೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತರಾತುರಿಯಲ್ಲಿ ಮೈಸೂರಿಗೆ ಹೋಗಿ ಮುಡಾ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದಿದ್ದರು. ಬಳಿಕ ಎಲ್ಲ ಅಧಿಕಾರಿಗಳನ್ನೂ ಏಕಾಏಕಿ ವರ್ಗಾವಣೆ ಮಾಡಿದ್ದಾರೆ. ದಾಖಲೆ ಪತ್ರಗಳನ್ನು ಹೊತ್ತುಕೊಂಡು ಬಂದಿದ್ದಾರೆ. ಇದರಲ್ಲಿ ಸಾಕ್ಷಿ ನಾಶದ ಹುನ್ನಾರ ಅಡಗಿದೆ.
ಮುಡಾ ಅವ್ಯವಹಾರಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿ ವರದಿ ಬಳಿಕವೂ 15-6-2024ರಲ್ಲಿ 42 ನಿವೇಶನವನ್ನು ಒಬ್ಬರಿಗೆ ಬದಲಿಯಾಗಿ ಕೊಟ್ಟಿದ್ದಾರೆ. ಇಂಥ ಸಾವಿರಾರು ನಿವೇಶನಗಳನ್ನು ಸರಕಾರ ಅಕ್ರಮವಾಗಿ ಹಂಚಿದ್ದು, 5,000 ಕೋ. ರೂ. ಅವ್ಯವಹಾರ ನಡೆದಿದೆ. ದಲಿತರು, ಪರಿಶಿಷ್ಟ ಸಮು ದಾಯಕ್ಕೆ ಮೀಸಲಿಟ್ಟ ನಿವೇಶನಗಳನ್ನು ತಮಗೆ ಬೇಕಾದಂತೆ ಹಂಚಿದ್ದಾರೆ.
ಪಾದಯಾತ್ರೆ ಬದಲು ಕಾರ್ ರ್‍ಯಾಲಿ?ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜುಲೈ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮುಂಚೆ ಬೆಂಗಳೂರಿನಿಂದ ಮೈಸೂರಿಗೆ ಕಾರ್ ರ್‍ಯಾಲಿ ಮಾಡಲು ಬಿಜೆಪಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ. ಜೆಡಿಎಸ್ ಜತೆ
ಸೇರಿಯೇ ಹೋರಾಟ
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಭಾಗಿಯಾದ ಮುಡಾ ಹಗರಣದ ಬಗ್ಗೆ ಮಾತನಾಡಲು ಸದನದಲ್ಲಿ ಬಿಜೆಪಿಯಿಂದ ನಿಲುವಳಿ ಸೂಚನೆ ಮಂಡಿಸಲಾಗುವುದು. ಜೆಡಿಎಸ್-ಬಿಜೆಪಿಯಲ್ಲಿ ಸಮನ್ವಯದ ಕೊರತೆ ಇಲ್ಲ. ಜೆಡಿಎಸ್‌ನೊಂದಿಗೆ ಸಮನ್ವಯ ಸಾಧಿಸಿ ಹೋರಾಡುತ್ತೇವೆ.
-ಆರ್. ಅಶೋಕ್, ವಿಧಾನಸಭೆ ವಿಪಕ್ಷ ನಾಯಕ ತತ್‌ಕ್ಷಣ ಸಿಬಿಐಗೆ ವಹಿಸಿ
ಮುಡಾದಲ್ಲಿ ಭಾರೀ ಮೊತ್ತದ ಹಗರಣ ನಡೆದಿದ್ದು, ತನಿಖೆಯನ್ನು ತತ್‌ಕ್ಷಣವೇ ಸಿಬಿಐಗೆ ಕೊಡಬೇಕು. ಅಲ್ಲದೆ ಎಸ್‌ಐಟಿ ಮಾಡಿ ತನಿಖೆ ನೆಪದಲ್ಲಿ ಈ ಪ್ರಕರಣವನ್ನು ಮುಚ್ಚಿ ಹಾಕಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ಅವರು ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು.
-ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ