ನವ ದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರು ಭಾನುವಾರ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಿದರು.
ಹಿರಿಯ ನಾಯಕರಾದ ಮುರಳಿ ಮನೋಹರ್ ಜೋಶಿ ಅವರೂ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆಯಲ್ಲಿ ಭಾಗವಹಿಸಿದರು.
ನವದೆಹಲಿಯ ಎನ್ ಡಿಎಂಸಿ ಕನ್ವೆನ್ಷನ್ ಸೆಂಟರ್ ನಲ್ಲಿ ಮಹತ್ವದ ಸಭೆ ನಡೆಯಿತು. ಗೋವಾ, ಮಣಿಪುರ, ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಗುಜರಾತ್ ಸೇರಿದಂತೆ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಜೊತೆಗೆ ಸಾಂಸ್ಥಿಕ ವಿಷಯಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಾಗುತ್ತಿದೆ.
ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ಮುಖಂಡರನ್ನು ಉದ್ದೇಶಿಸಿ ಭಾಷಣ ಮಾಡಿದರು.
ಕರೋನಾ ಪ್ರೋಟೋಕಾಲ್ ಕಾರಣದಿಂದ ಸಭೆಗೆ ಕೇವಲ 124 ಜನರನ್ನು ಆಹ್ವಾನಿಸಲಾಗಿತ್ತು, ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 10 ಗಂಟೆಗೆ ಸಭೆಗೆ ಆಗಮಿಸಿದರು. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.
100 ಕೋಟಿ ಲಸಿಕೆಗಳ ಗುರಿಯನ್ನು ಸಾಧಿಸಿದ್ದಕ್ಕಾಗಿ ನಡ್ಡಾ ಅವರು ಪ್ರಧಾನಿ ಮೋದಿಯವರಿಗೆ ಹಾರ ಹಾಕಿ ಗೌರವಿಸಿದರು. ಕೇಂದ್ರ ಸಚಿವರಲ್ಲದೆ, ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹಲವು ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.
ಈ ಸಭೆಯಲ್ಲಿ ವಿವಿಧ ರಾಜ್ಯಗಳ ಬಿಜೆಪಿ ಘಟಕಗಳ ಮುಖಂಡರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.