Advertisement

ಬಿಜೆಪಿ ರಾ.ಪ್ರಧಾನ ಕಾರ್ಯದರ್ಶಿ ರಾಮ್‌ ಲಾಲ್‌ ಆಸ್ಪತ್ರೆಗೆ ದಾಖಲು

09:35 AM Jan 17, 2019 | Team Udayavani |

ಹೊಸದಿಲ್ಲಿ : ಬಿಜೆಪಿ ನಾಯಕರಿಗೆ ಅನಾರೋಗ್ಯ ಪರ್ವ ಕಾಡುತ್ತಿರುವಂತೆ ಕಂಡು ಬರುತ್ತಿದೆ. 

Advertisement

ಇದೀಗ ತೀವ್ರ ಜ್ವರದಿಂದ ಬಳಲುತ್ತಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ ಲಾಲ್‌ ಅವರನ್ನು  ಇಂದು ಗುರುವಾರ ನೋಯ್ಡಾ ಕೈಲಾಶ್‌ ಆಸ್ಪತ್ರೆಗೆ ಸೇರಿಸಲಾಗಿದೆ. 

ಲಾಲ್‌ ಅವರು ಪಶ್ಚಿಮ ಉತ್ತರ ಪ್ರದೇಶದ ಆರ್‌ಎಸ್‌ಎಸ್‌ ಪ್ರಚಾರಕರಾಗಿದ್ದಾರೆ. 

ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಮತ್ತು ಕಾನೂನು ಸಚಿವ ರವಿ ಶಂಕರ್‌ ಪ್ರಸಾದ್‌ ಈಗಾಗಲೇ ಅನಾರೋಗ್ಯದಿಂದ ಏಮ್ಸ್‌ ಆಸ್ಪತ್ರೆಗೆ ಸೇರಿದ್ದಾರೆ.

ಶಾ ಅವರು ಚೇತರಿಸಿಕೊಳ್ಳುತ್ತಿದ್ದು ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.  

Advertisement
Advertisement

Udayavani is now on Telegram. Click here to join our channel and stay updated with the latest news.

Next