Advertisement

ಕರ್ನಾಟಕದತ್ತ ಮೋದಿ- ಶಾ ಚಿತ್ತ: ದೆಹಲಿಯಲ್ಲಿಂದು ರಾಷ್ಟ್ರೀಯ ಪದಾಧಿಕಾರಿಗಳ ಸಭೆ

11:05 AM Dec 05, 2022 | Team Udayavani |

ಬೆಂಗಳೂರು: ಗುಜರಾತ್ ಚುನಾವಣೆ ಮುಕ್ತಾಯವಾಗುತ್ತಿರುವ ಬೆನ್ನಲ್ಲೆ ಉಳಿದ ರಾಜ್ಯಗಳಲ್ಲಿ ಪಕ್ಷ ಬಲಪಡಿಸಲು ಮುಂದಾಗಿರುವ ಬಿಜೆಪಿ ದಿಲ್ಲಿಯಲ್ಲಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಆಯೋಜಿಸಿದೆ.

Advertisement

ಈ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ತೆರಳಿದ್ದಾರೆ. ತವರು ಚುನಾವಣೆಯ ಬಳಿಕ ಕರ್ನಾಟಕದತ್ತ ಮೋದಿ- ಅಮಿತ್ ಶಾ ಚಿತ್ತ ನೆಟ್ಟಿದ್ದು ಇಂದು ದೆಹಲಿಯಲ್ಲಿ ನಡೆಯುತ್ತಿರುವ ಸಭೆಗೆ ವಿಶೇಷ ಮಹತ್ವ ಲಭಿಸಿದೆ.

ಇದನ್ನೂ ಓದಿ:ಹೃದಯ ಸ್ತಂಭನ: ಮದುವೆ ಮಂಟಪದಲ್ಲೇ ಕುಸಿದು ಬಿದ್ದು 20 ವರ್ಷದ ವಧು ಮೃತ್ಯು

ಒಟ್ಟು ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಪದಾಧಿಕಾರಿಗಳ ಸಭೆಗೆ ಚಾಲನೆ ನೀಡಲಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಮಿತ್​​​ ಶಾ, ಬಿ.ಎಲ್ ಸಂತೋಷ್​, ರಾಜನಾಥ್​ ಸಿಂಗ್​ ಸೇರಿದಂತೆ ಹಲವು ಪ್ರಮುಖರ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ. ಮುಂದಿನ ಎಲೆಕ್ಷನ್​ ಬಗ್ಗೆ ಪದಾಧಿಕಾರಿಗಳ ಸಭೆಯಲ್ಲಿ ರಣತಂತ್ರ ನಡೆಯಲಿದೆ. ಚುನಾವಣಾ ದೃಷ್ಟಿಯಿಂದ ರಾಜ್ಯದಲ್ಲಿ ಹಠಾತ್ ಆಗಿ ಒಂದಿಷ್ಟು ಬದಲಾವಣೆ ನಡೆಯುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next