Advertisement

BJP ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಕರೆ ಮಾಡಿದ್ದರು, ನಾಳೆ ಭೇಟಿ ಮಾಡುತ್ತೇನೆ: ಯತ್ನಾಳ

02:40 PM Mar 04, 2024 | Team Udayavani |

ವಿಜಯಪುರ: ಬೆಳಗಾವಿಯಲ್ಲಿ ಪಕ್ಷದ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ತಡರಾತ್ರಿ ಕರೆ ಮಾಡಿದ್ದರು. ನಾಳೆ ಬೆಳಗಾವಿಗೆ ತೆರಳಿ ಭೇಟಿಯಾಗಲಿದ್ದೇನೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು‌.

Advertisement

ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಇಂದು ನಗರದಲ್ಲಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ನಾಳೆ ನಾನು ಬೆಳಗಾವಿಗೆ ತೆರಳಿ ರಾಷ್ಟ್ರೀಯ ಅಧ್ಯಕ್ಷರ ಸಭೆಯಲ್ಲಿ ಭಾಗಿಯಾಗಲಿದ್ದೇನೆ ಎಂದರು.

ಪರಿಶಿಷ್ಟ ಜಾತಿಗೆ ಮೀಸಲಿರುವ ವಿಜಯಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಿದರೂ ಪಕ್ಷದ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡುತ್ತೇವೆ. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡೋದು ನಮ್ಮ ಗುರಿ. ಹೀಗಾಗಿ ಹಾಲಿ ಸಂಸದ ರಮೇಶ ಜಿಗಜಿಣಗಿ ಅಥವಾ ಬೇರೆ ಯಾರಿಗೆ ಟಿಕೆಟ್ ನೀಡಿದರೂ ನಾವು ಪಕ್ಷದ ಪರವಾಗಿ ಕೆಲಸ ಮಾಡುತ್ತೇವೆ. ಮೋದಿ ಅವರನ್ನು ಪ್ರಧಾನಿ ಮಾಡುವುದಕ್ಕಾಗಿ ಎಲ್ಲರೂ ಕೈಜೋಡಸಲಿದ್ದೇವೆ ಎಂದರು.

ಸಂಸದ ರಮೇಶ ಜಿಗಜಿಣಗಿ ಅವರ ಅನಾರೋಗ್ಯದ ಬಗ್ಗೆ ಅವರ ಪುತ್ರನೆ ಸ್ಪಷ್ಟಪಡಿಸಿದ್ದಾರೆ. ರಾಜಕೀಯ ಕಾರಣಕ್ಕಾಗಿ ಸುಳ್ಳು ವಂದತಿ ಹಬ್ಬಿಸುತ್ತಿದ್ದಾರೆ ಎನ್ನುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next