Advertisement

BJP-NDA ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ಸಂಪೂರ್ಣ ಸಿದ್ಧ: ಪ್ರಧಾನಿ ಮೋದಿ

05:14 PM Mar 16, 2024 | Team Udayavani |

ಹೊಸದಿಲ್ಲಿ: ಚುನಾವಣ ಆಯೋಗ ಲೋಕಸಭಾ ಚುನಾವಣೆ ಮತದಾನ ದಿನಾಂಕ ಘೋಷಿಸಿದ ಬೆನ್ನಲ್ಲೇ ”ಬಿಜೆಪಿ-ಎನ್ ಡಿಎ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ಸಂಪೂರ್ಣ ಸಿದ್ಧವಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Advertisement

”ಪ್ರಜಾಪ್ರಭುತ್ವದ ದೊಡ್ಡ ಹಬ್ಬ ಇದು ! ಚುನಾವಣ ಆಯೋಗ 2024 ರ ಲೋಕಸಭೆ ಚುನಾವಣೆ ದಿನಾಂಕಗಳನ್ನು ಪ್ರಕಟಿಸಿದೆ. ನಾವು, ಬಿಜೆಪಿ-ಎನ್‌ಡಿಎ ಚುನಾವಣೆಗೆ ಸಂಪೂರ್ಣ ಸಿದ್ಧರಾಗಿದ್ದೇವೆ. ಉತ್ತಮ ಆಡಳಿತ ಮತ್ತು ಕ್ಷೇತ್ರಗಳಾದ್ಯಂತ ಸೇವೆ ಸಲ್ಲಿಸಿರುವ ನಮ್ಮ ಟ್ರ್ಯಾಕ್ ರೆಕಾರ್ಡ್ ಆಧಾರದ ಮೇಲೆ ನಾವು ಜನರ ಬಳಿಗೆ ಹೋಗುತ್ತಿದ್ದೇವೆ” ಎಂದು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Lok Sabha; ಕರ್ನಾಟಕದಲ್ಲಿ 2 ಹಂತದಲ್ಲಿ ಮತದಾನ: ಕ್ಷೇತ್ರವಾರು ವಿವರಗಳು ಇಲ್ಲಿವೆ

ಏಪ್ರಿಲ್ 19 ರಿಂದ 7 ಹಂತಗಳಲ್ಲಿ ಮತದಾನ ನಡೆಯಲಿದೆ, ಫಲಿತಾಂಶ ಜೂನ್ 4 ರಂದು ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next