ಬೆಂಗಳೂರು: ಬಿ.ಎನ್.ವಿಜಯಕುಮಾರ್ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಜಯನಗರ ಕ್ಷೇತ್ರದ ಮತದಾನ ಜೂ.11ಕ್ಕೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಬಿ.ಎನ್. ಪ್ರಹ್ಲಾದ್ ಬಾಬು ಶುಕ್ರವಾರ
ನಾಮಪತ್ರ ಸಲ್ಲಿಸಿದರು.
ಜಯನಗರ 4ನೇ ಬ್ಲಾಕ್‌ನಲ್ಲಿರುವ ಗಣೇಶ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ ಪೂಜೆ ಸಲ್ಲಿಸಿ,ಜಯನಗರ ವಾಣಿಜ್ಯ ಸಂಕೀರ್ಣದಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಕೇಂದ್ರ ಸಚಿವ ಅನಂತಕುಮಾರ್,
ಪಾಲಿಕೆ ಸದಸ್ಯ ಗೋವಿಂದನಾಯ್ಡು, ಮಾಜಿ ಪಾಲಿಕೆ ಸದಸ್ಯ ಸಿ.ಕೆ.ರಾಮಮೂರ್ತಿ ಇತರರು ಉಪಸ್ಥಿತರಿದ್ದರು.
ಈಗಾಗಲೇ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸೌಮ್ಯರೆಡ್ಡಿ, ಜೆಡಿಎಸ್‌ನಿಂದ ಕಾಳೇಗೌಡ, ಪಕ್ಷೇತರ ಅಭ್ಯರ್ಥಿಯಾಗಿ ರವಿ ಕೃಷ್ಣಾರೆಡ್ಡಿ ನಾಮಪತ್ರ ಸಲ್ಲಿಸಿದ್ದು,ಒಟ್ಟು 19 ಮಂದಿ ಕಣದಲ್ಲಿ ಇದ್ದಾರೆ. ವಿಜಯಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮಾತ್ರ ನಾಮಪತ್ರ ಸಲ್ಲಿಸಲು ಅವಕಾಶವಿತ್ತು.