Advertisement
ತಾಲೂಕಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಲು ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲೇ ಬೆಲೆಗಳು ಏರಿಕೆಯಾಗಿರುವುದರಿಂದ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಗ್ಯಾಸ್ ಬೆಲೆ ಏರಿಕೆಯಾಗಿದೆ. ಸದ್ಯದಲ್ಲೇ ಅದರ ಬೆಲೆ ಕಡಿಮೆ ಆಗಲಿದೆ. ಜನಸಾಮಾನ್ಯರ ಹಿತಕಾಯಲು ಬೆಲೆ ಕಡಿಮೆ ಮಾಡುವ ಪ್ರಯತ್ನ ಆಗಲಿದೆ ಎಂದರು.
Related Articles
ಎದುರಿಸಲಾ ಗುವುದು. ಮುಂದಿನ ದಿನಗಳಲ್ಲಿ ಮಂಡ್ಯ ಭಾಗದಲ್ಲಿ ಮುಖ್ಯಮಂತ್ರಿ ಪ್ರವಾಸ ಮಾಡಲಿದ್ದಾರೆ ಎಂದು ತಿಳಿಸಿದರು.
Advertisement
ಎನ್‌ಇಪಿಯಿಂದ ಶಿಕ್ಷಣ ಅಭಿವೃದ್ಧಿ: ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರತಿಯೊಬ್ಬರ ಬದುಕು ಹಸನಾಗಲಿದೆ. ಆದ್ದರಿಂದ ಕರ್ನಾಟಕದಲ್ಲೇ ಮೊದಲಬಾರಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗುತ್ತಿದೆ. ಇದರಲ್ಲಿ ಏನು ತಪ್ಪು ಇದೆ ಅಂತ ವಿರೋಧ ಪಕ್ಷದವರು ಹೇಳುತ್ತಿಲ್ಲ ಎಂದು ಹೇಳಿದರು. ಹಂತ ಹಂತವಾಗಿ ಜಾರಿ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಂತ ಹಂತವಾಗಿ ಜಾರಿ ಮಾಡಲಿದ್ದೇವೆ. ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ಜಾರಿ ಮಾಡಿದ್ದು, ಕರ್ನಾಟಕವಾಗಿದೆ. ಅಭಿವೃದ್ದಿಗೆ ಹೊಸ ಐತಿಹ್ಯ ಬರೆಯಲಿದೆ ಎಂದು ಎಂದರು. ಗಣೇಶ ಉತ್ಸವ ನಿಯಮ ಸಡಿಲ:ಗಣೇಶೋತ್ಸವಕ್ಕೆ ಕೋವಿಡ್-19ರ ಮಾರ್ಗಸೂಚಿಯ ನಡುವೆಯೂ ನಿಯಮಗಳನ್ನು ಸಡಿಲಗೊಳಿಸಿದ್ದೇವೆ. ಈಗ 5 ದಿನ ಹಬ್ಬ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಇದಕ್ಕಿಂತ ಇನ್ನೇನು ಮಾಡಲು ಸಾಧ್ಯ. ಜನರಪರ ವಾಗಿ ಮಾಡಿದ್ದೇವೆ ಎಂದರು.ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ, ಬಿಜೆಪಿ ನಗರಾಧ್ಯಕ್ಷ ವಿವೇಕ್, ಮಾಜಿ ಅಧ್ಯಕ್ಷ ಎಚ್.ಆರ್. ಅರವಿಂದ್, ಡಾ.ಸಿದ್ದರಾಮಯ್ಯ, ಯುವ ಮುಖಂಡಕೇಶವ್ ಮತ್ತಿತರರಿದ್ದರು.