Advertisement

BJP; ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ: ಕಾಂಗ್ರೆಸ್ ನಿಂದ ಖಾಲಿ ಕುರ್ಚಿಯ ಚಿತ್ರ!

04:58 PM Jul 01, 2023 | Team Udayavani |

ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆ ವಿಳಂಬವಾಗಿರುವ ಕುರಿತು ರಾಜ್ಯ ಕಾಂಗ್ರೆಸ್ ಮತ್ತೆ ಬಿಜೆಪಿ ವಿರುದ್ಧ ವ್ಯಂಗ್ಯವಾಗಿ ಲೇವಡಿ ಮಾಡಿದೆ. ಶುಕ್ರವಾರ ಟ್ವೀಟ್ ಗಳ ಮೂಲಕ ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಖಾಲಿ ಕುರ್ಚಿ ಇರುವ ಫೋಟೋ ಸಮೇತ ಟ್ವೀಟ್ ಮಾಡಿದೆ.

Advertisement

”ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ. ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು.ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ.ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ!” ಎಂದು ಟ್ವೀಟ್ ಮಾಡಿದ್ದಾರೆ.

”ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು.ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು.ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು.ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು.ಮೂರು ಗ್ಯಾರಂಟಿಗಳೂ ಜಾರಿಯಾದವು.ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ.ಬಿಜೆಪಿ ಪಕ್ಷ ಆಡಳಿತ ಮಾಡಲು ಆಸಮರ್ಥರು ಎಂದು ಈಗಾಗಲೇ ಜನರು ಸರ್ಟಿಫಿಕೇಟ್ ಕೊಟ್ಟಾಗಿದೆ, ಈಗ ವಿರೋಧ ಪಕ್ಷವಾಗಿರಲೂ ಸಹ ಆಸಮರ್ಥರು ಎಂದು ತಿಳಿಯುತ್ತಿದೆ. ಪ್ರಜಾಪ್ರಭುತ್ವದ ಸೌಂದರ್ಯಕ್ಕಾಗಿ ಸಮರ್ಥ ವಿಪಕ್ಷ ನಾಯಕನನ್ನು ಎದುರು ನೋಡುತ್ತಿದ್ದೇವೆ.ನಮ್ಮ ಆಸೆ ಈಡೇರುತ್ತದೋ ಇಲ್ಲವೋ ಗೊತ್ತಿಲ್ಲ.” ಎಂದು ವ್ಯಂಗ್ಯ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next