Advertisement

BJP; ಕನಕಪುರದಲ್ಲಿ ಠೇವಣಿ ಕಳೆದುಕೊಂಡವರು ವಿಪಕ್ಷ ನಾಯಕ: ಕಾಂಗ್ರೆಸ್ ಲೇವಡಿ

08:44 PM Nov 17, 2023 | Team Udayavani |

ಬೆಂಗಳೂರು: ಬಿಜೆಪಿ ವಿಧಾನಸಭೆಯ ವಿಪಕ್ಷ ನಾಯಕನನ್ನಾಗಿ ಹಿರಿಯ ನಾಯಕ ಆರ್.ಅಶೋಕ್ ಅವರನ್ನು ಆಯ್ಕೆ ಮಾಡುತ್ತಿದ್ದಂತೆ ಕಾಂಗ್ರೆಸ್ ”ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ!” ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಲೇವಡಿ ಮಾಡಿದೆ.

Advertisement

”ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನ.ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರಂತಹ ನಾಯಕರೆದುರು ತರಗೆಲೆಯಂತಹ ವ್ಯಕ್ತಿಯನ್ನು ತಂದು ಕೂರಿಸಿದೆ ಬಿಜೆಪಿ!” ಎಂದು ಪೋಸ್ಟ್ ಮಾಡಿದೆ.

”ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡಿದ್ದೇ ಬಿಜೆಪಿಯ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಅರ್ಹತೆಯೇ? ಈ ಆಯ್ಕೆ ಕುಮಾರಸ್ವಾಮಿಯವರ ನಿರ್ದೇಶನದ ಮೇರೆಗೆ ಆಗಿದ್ದೋ, ಜೆಡಿಎಸ್ ಶಾಸಕರ ಅಭಿಪ್ರಾಯದ ಆಧಾರದಲ್ಲಿ ಆಗಿದ್ದೋ, ಬಿಜೆಪಿ ಶಾಸಕರ ಅಭಿಪ್ರಾಯದಿಂದ ಆಗಿದ್ದೋ ?” ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಣತಂತ್ರದ ಭಾಗವಾಗಿ ಡಿ.ಕೆ.ಶಿವಕುಮಾರ್ ಅವರ ಭದ್ರ ಕೋಟೆ ಕನಕಪುರದಲ್ಲಿ ಕಣಕ್ಕಿಲ್ದಿದ್ದ ಅಶೋಕ್ ಅವರು 19753 ಮತಗಳನ್ನು ಮಾತ್ರ ಪಡೆದು ಠೇವಣಿ ಕಳೆದುಕೊಂಡಿದ್ದರು. ಡಿ.ಕೆ.ಶಿವಕುಮಾರ್ 1,43,023 ಮತಗಳನ್ನು ಪಡೆದು ದಾಖಲೆಯ ಅಂತರದ ಜಯ ಸಾಧಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next