ಹಳೆಯಂಗಡಿ: ಕುಟುಂಬದ ದರ್ಬಾರ್ ಇಲ್ಲದೆ, ಸಾಮಾನ್ಯ ಕಾರ್ಯಕರ್ತನೂ ಸಹ ಮುಖ್ಯಮಂತ್ರಿ, ಪ್ರಧಾನಿ ಹುದ್ದೆಯಂತಹ ಅತ್ಯುನ್ನತ ಸ್ಥಾನಮಾನ ಪಡೆಯುವ ಅರ್ಹತೆ ಇರುವ ಬಿಜೆಪಿ ಅಪ್ಪಟ ಕಾರ್ಯಕರ್ತರ ಸಂಘಟನಾತ್ಮಕ ಪಕ್ಷವಾಗಿದೆ. ನನ್ನಿಂದ ಪಕ್ಷ ಎನ್ನದೆ, ನಮ್ಮಿಂದ ಪಕ್ಷ ಬೆಳೆ ಯಬೇಕು ಎಂಬ ಭಾವನೆ ಕಾರ್ಯ ಕರ್ತರಲ್ಲಿ ಅಗ ತ್ಯ. ನಾಯಕನಾಗಿ ಅಧಿಕಾರ ಪಡೆದ ಅನಂತರವೂ ತಳಮಟ್ಟದ ಕಾರ್ಯಕರ್ತನನ್ನು ಮರೆಯಬಾರದು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಹಾಗೂ ಮೂಲ್ಕಿ ಮೂಡಬಿದಿರೆ ಕ್ಷೇತ್ರದ ವಿಸ್ತಾರಕ ಪ್ರಮುಖ್ ಶ್ಯಾಮಲಾ ಕುಂದರ್ ಹೇಳಿದರು.
ಅವರು ಹಳೆಯಂಗಡಿಯ ಭಾರತೀಯ ಜನತಾ ಪಾರ್ಟಿಯ ಗ್ರಾಮ ಸಮಿತಿಯ ಆಶ್ರಯದಲ್ಲಿ ಕಿನ್ನಿಗೋಳಿ ಶಕ್ತಿಕೇಂದ್ರದ ಸಹಕಾರದಲ್ಲಿ ಎನ್‌ಡಿಎ ಸರಕಾರದ 3 ವರ್ಷಗಳ ಸಾಧನೆ ಹಾಗೂ ಯೋಜನೆಗಳ ಮಾಹಿತಿ ಕಾರ್ಯಾಗಾರ ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಕಾರ್ಯಕ್ರಮವನ್ನು ಹಳೆಯಂಗಡಿಯ ಶ್ರೀ ಜಾರಂದಾಯ ದೈವಸ್ಥಾನದ ಶ್ರೀನಿವಾಸ ಕಲಾ ಮಂದಿರದಲ್ಲಿ ಉದ್ಘಾಟಿಸಿ ಮಾತನಾಡಿದರು.
ಮೂಲ್ಕಿ ಮೂಡಬಿದಿರೆ ಕ್ಷೇತ್ರದ ಅಧ್ಯಕ್ಷ ಈಶ್ವರ್ ಕಟೀಲ್ ಅಧ್ಯಕ್ಷತೆ ವಹಿಸಿ, ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವಂಥ ಕೆಲ ಸ ವನ್ನು ಸಾಮಾಜಿಕ ಜಾಲತಾಣದಲ್ಲಿ ಮಾಡಬೇಡಿ. ಪಕ್ಷದ ವರಿಷ್ಠರು ಸೂಚಿಸಿದ ಅಭ್ಯರ್ಥಿಯನ್ನು ಗೆಲ್ಲಿಸುವ ಪಣತೊಟ್ಟು ಈ ಬಾರಿ ಬಿಜೆಪಿ ಮೂಲ್ಕಿ ಮೂಡಬಿದಿರೆ ಕ್ಷೇತ್ರದಲ್ಲಿ ಕಮಲವನ್ನು ಅರಳಿಸಬೇಕು ಎಂದರು.
ಕಾರ್ಯಾಗಾರದಲ್ಲಿ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಬಿಜೆಪಿ ವಕ್ತಾರ ವಿಕಾಸ ಪುತ್ತೂರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷದಲ್ಲಿ 14 ಸಾವಿರ ಕೋಟಿ. ರೂ.ಗಳ ಅನುದಾನ ಕೇಂದ್ರ ಸರಕಾರದಿಂದ ಮಂಜೂರಾಗಿದೆ. 5,400 ಕೋ. ರೂ. ಅನ್ನು ರಸ್ತೆ ನಿರ್ಮಾಣಕ್ಕೆ ಬಳಸಲಾಗಿದೆ. ಸಣ್ಣ ಮಕ್ಕಳಿಂದ ಹಿಡಿದು ಆಬಾಲವೃದ್ಧರವರೆಗೆ ಇರುವ ಕೇಂದ್ರದ ಯೋಜನೆಗಳನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಫಲಾನುಭವಿಗೆ ತಲುಪುತ್ತಿದೆ ಎಂದರು.
ರಾಜ್ಯ ಹಿಂದುಳಿದ ವರ್ಗ ಮೋರ್ಚಾದ ಕಾರ್ಯದರ್ಶಿ ಸತ್ಯಜಿತ್ ಸುರತ್ಕಲ್ ಬಿಜೆಪಿ ಪಕ್ಷದ ಹಿನ್ನೆಲೆಯನ್ನು ವಿವ ರಿ ಸಿ ದರು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ತಾಲೂಕು ಪಂಚಾಯತ್ ಸದಸ್ಯ ಜೀವನ್ ಪ್ರಕಾಶ್ ಕಾಮೆರೊಟ್ಟು ವಿವಿಧ ಯೋಜನೆಗಳ ಬಗ್ಗೆ ವಿವರಿಸಿದರು. ಕಾರ್ಯಕರ್ತರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.
ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ವಿನೋದ್ ಸಾಲ್ಯಾನ್ ಬೆಳ್ಳಾಯರು, ತಾಲೂಕು ಪಂಚಾಯತ್ ಸದಸ್ಯೆಯರಾದ ರಶ್ಮಿ ಆಚಾರ್ಯ, ವಜ್ರಾಕ್ಷಿ ಶೆಟ್ಟಿ, ಪಿಸಿಎ ಬ್ಯಾಂಕ್ ಅಧ್ಯಕ್ಷ ಎಸ್.ಎಸ್. ಸತೀಶ್ ಭಟ್ ಕೊಳುವೈಲು, ಪಡುಪಣಂಬೂರು ಗ್ರಾ.ಪಂ. ಅಧ್ಯಕ್ಷ ಮೋಹನ್‌ದಾಸ್, ಕೆಮ್ರಾಲ್ ಪಂ. ಅಧ್ಯಕ್ಷ ನಾಗೇಶ್, ವೈದ್ಯರ ಪ್ರಕೋಷ್ಠದ ಡಾ| ನಿಶಾಂಕ್ ಶೆಟ್ಟಿಗಾರ್, ಕಿನ್ನಿಗೋಳಿ ಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.
ಹಳೆಯಂಗಡಿ ಗ್ರಾಮ ಸಮಿತಿ ಅಧ್ಯಕ್ಷ ನರೇಂದ್ರ ಪ್ರಭು ಸ್ವಾಗತಿಸಿ, ನಿಶಾ ಎಂ. ವಂದಿಸಿದರು. ಪ್ರಧಾನ ಕಾರ್ಯದರ್ಶಿ ಚಿತ್ರಾ ಸುಕೇಶ್ ನಿರೂಪಿಸಿದರು.