Advertisement
“ದಲಿತರ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಕದ್ದ ಸರಕಾರಕ್ಕೆ ಧಿಕ್ಕಾರ, ದಲಿತ ವಿರೋಧಿ ಮಂತ್ರಿ ಪ್ರಿಯಾಂಕ್ ಖರ್ಗೆ, ಸಿದ್ದರಾಮಯ್ಯಗೆ ಧಿಕ್ಕಾರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯ ಸರಕಾರಕ್ಕೆ ಧಿಕ್ಕಾರ’ ಮುಂತಾದ ಘೋಷಣೆಗಳು ಪ್ರತಿಭಟನೆಯಲ್ಲಿ ಮೊಳಗಿದವು. ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಎಸ್.ಕೆ. ಬೆಳ್ಳುಬ್ಬಿ ಸಹಿತ ಅನೇಕ ನಾಯಕರು ಪಾಲ್ಗೊಂಡಿದ್ದರು.
ರಾಜ್ಯ ಸರಕಾರ ಎಸ್‌ಸಿಪಿ, ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿರುವುದನ್ನು ಹಿಂಪಡೆಯದಿದ್ದರೆ ಎಸ್ಸಿ , ಎಸ್ಟಿ ಸಮುದಾಯದ ಪರವಾಗಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದರು. ಜನರಿಗೆ ಆಶ್ವಾಸನೆಗಳನ್ನು ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಈಗ ದಲಿತರ ಜೀವನದ ಜತೆ ಆಟ ಆಡುತ್ತಿದೆ ಎಂದು ಆರೋಪಿಸಿದರು.
ನೀವು 34 ಸಾವಿರ ಕೋಟಿ ರೂ. ಕೊಡುವು ದಾಗಿ ಹೇಳಿದ್ದೀರಿ. ಆದರೆ ಸುಮಾರು 23 ಸಾವಿರ ಕೋಟಿ ಮಾತ್ರ ಎಸ್‌ಸಿಪಿ, ಟಿಎಸ್‌ಪಿಗೆ ನೀಡುತ್ತಿದ್ದೀರಿ. ಶಕ್ತಿ ಯೋಜನೆಗೆ ಎಸ್‌ಸಿಪಿ, ಟಿಎಸ್‌ಪಿಯ 700 ಕೋಟಿ ರೂ. ಮೀಸಲಿಟ್ಟಿದ್ದೀರಿ. ಶಕ್ತಿ ಯೋಜನೆಯಡಿ ಎಸ್ಸಿ, ಎಸ್ಟಿ ಯಾರು ಎಂದು ಹೇಗೆ ಗುರುತಿಸುತ್ತೀರಿ? ಗೃಹ ಲಕ್ಷ್ಮಿ ಯೋಜನೆಯಡಿ ಗೃಹಿಣಿಯರಿಗೆ 5,500 ಕೋಟಿ ರೂ. ಎಸ್‌ಸಿಪಿ, ಟಿಎಸ್‌ಪಿ ಹಣವನ್ನು ನೀಡಿದ್ದೀರಿ. ಅವರಲ್ಲಿ ಎಸ್ಸಿ, ಎಸ್ಟಿ ಯಾರು ಅಂತ ಹೇಗಿ ಹುಡುಕುತ್ತೀರಿ ಎಂದು ಪ್ರಶ್ನಿಸಿದರು.
Related Articles
Advertisement