Advertisement
ಪಟ್ಟಣದ ಪುರಸಭೆಯಿಂದ ನಾಲ್ಕು ಬಾರಿ ಸತತವಾಗಿ ಪುರಸಭೆ ಸದಸ್ಯರಾಗಿ ಆಯ್ಕೆಯಾಗಿ ಎರಡು ಬಾರಿ ಪುರಸಭೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಸುಮಾರು 20 ವರ್ಷ ಕಾಂಗ್ರೆಸ್‌ನಲ್ಲಿ ಕೆಲಸ ಮಾಡಿದ್ದು, ರಾಜ್ಯ ಆಹಾರ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರ ಕಟ್ಟಾ ಬೆಂಬಲಿಗ. ಸುಮಾರು 8 ವರ್ಷ ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಎರಡು ವರ್ಷದ ಹಿಂದೆ ಕಾಂಗ್ರೆಸ್ ತೊರೆದು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
Related Articles
Advertisement
ಬಿಜೆಪಿ ಸಂಘಟನೆ ಶೂನ್ಯ: ಕೋಲಾರ ಸಂಸದ ಎಸ್.ಮುನಿಸ್ವಾಮಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ತನ್ನ ಪ್ರಭಾವವನ್ನು ವಿಸ್ತರಣೆ ಮಾಡಿದ್ದರೂ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ ಒಂದು ಸ್ಥಾನ ಗೆಲ್ಲಿಕೊಳ್ಳಲು ವಿಫಲರಾಗಿದ್ದಾರೆ. ಈ ಹಿನ್ನೆಲೆ ಬಂಗಾರಪೇಟೆ ಕ್ಷೇತ್ರವನ್ನು ಸಂಪೂರ್ಣವಾಗಿ ಮರೆತು ಹೋಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಆಭ್ಯರ್ಥಿ ಎಂ. ನಾರಾಯಣಸ್ವಾಮಿ ಮತದಾನದಿಂದ ದೂರ ಉಳಿದಿದ್ದ ರಿಂದ ಇದರ ಎಫೆಕ್ಟ್ ಸಂಸದ ಎಸ್.ಮುನಿಸ್ವಾಮಿಗೂ ಹೊಡೆತ ಬಿದ್ದಿದೆ. ಪ್ರಸ್ತುತ ಕ್ಷೇತ್ರದಲ್ಲಿ ಬಹುತೇಕ ಬಿಜೆಪಿ ಮುಖಂಡರು ಮುನಿಸಿಕೊಂಡಿರು ವುದರಿಂದ ಬಿಜೆಪಿ ಪಕ್ಷದ ಸಂಘಟನೆ ಶೂನ್ಯವಾಗಿದ್ದು, ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂದೇ ಹೇಳಲಾಗುತ್ತಿದೆ.
ಚುನಾವಣೆ ಪೈಪೋಟಿ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪಕ್ಷಗಳಿಗಿಂತ ಅಭ್ಯರ್ಥಿಗಳ ವ್ಯಕ್ತಿತ್ವನ್ನು ನಿರ್ಧಾರ ಕೈಗೊಳ್ಳುವುದರಿಂದ ಮುಂಬರುವ ಜಿಪಂ ಚುನಾವಣೆಗೆ ಬಿಜೆಪಿ ಮುಖಂಡ ಕೆ.ಚಂದ್ರಾರೆಡ್ಡಿ ಸ್ಪರ್ಧಿಸುವುದರಿಂದ ಚುನಾವಣಾ ಕಣವು ರಂಗೇರಿಲಿದೆ. ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಹುಡುಕಾಟ ಅಗತ್ಯವಿಲ್ಲ. ಈಗಾಗಲೇ ಪ್ರತಿ ಕ್ಷೇತ್ರದಲ್ಲೂ ಇಬ್ಬರಿಗಿಂತ ಹೆಚ್ಚು ಪ್ರಭಾವಿ ಅಭ್ಯರ್ಥಿ ಇರುವುದರಿಂದ ಭಿನ್ನಮತ ಎದುರಿಸುತ್ತಿರುವ ಹಿನ್ನೆಲೆ ಬಿಜೆಪಿ ಸಹ ಪ್ರಭಾವಿಗಳನ್ನು ಕಣಕ್ಕಿಳಿಸಿದರೆ ಚುನಾವಣೆಯ ಪೈಪೋಟಿ ಹೆಚ್ಚಾಗಲಿದೆ.
ಬಿಜೆಪಿಯಲ್ಲಿ ಒಗ್ಗಟ್ಟಿನ ಮಂತ್ರ ಅಗತ್ಯ:
ತಾಲೂಕಿನಲ್ಲಿ ಕಳೆದ ವಿಧಾನಸಭೆ ಚನಾವಣೆಯ ವೇಳೆ ಬಿಜೆಪಿ ಅಭ್ಯರ್ಥಿ ನಡೆದುಕೊಂಡ ರೀತಿಯಿಂದ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ತೀವ್ರ ಬೇಸರಗೊಂಡಿದ್ದಾರೆ. ಮತದಾನಕ್ಕೂ ಮುನ್ನಾ ಬಿಜೆಪಿ ಅಭ್ಯರ್ಥಿಯಾಗಿ ಎಂ. ನಾರಾಯಣಸ್ವಾಮಿ ನಡೆದುಕೊಂಡ ರೀತಿಯಿಂದ ಬಿಜೆಪಿ ಪಕ್ಷವು ತನ್ನ ಅಸ್ತಿತ್ವವನ್ನು ಮೇಲ್ನೋಟಕ್ಕೆ ಕಳೆದುಕೊಂಡಿದ್ದು, ತಾಲೂಕಿನಲ್ಲಿ ಬಿಜೆಪಿ ಪಕ್ಷದಲ್ಲಿ ಪ್ರಭಾವಿಗಳಾಗಿದ್ದ ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ, ಇವರ ಪುತ್ರ ಜಿಪಂ ಮಾಜಿ ಸದಸ್ಯ ಬಿ.ವಿ.ಮಹೇಶ್, ಎಂ. ನಾರಾಯಣಸ್ವಾಮಿ ಬೆಂಬಲಿಗ ಮುಖಂಡರು ಸದ್ಯಕ್ಕೆ ತಟಸ್ಥರಾಗಿ ರುವುದರಿಂದ ಮುಂಬರುವ ಜಿಲ್ಲಾ ಮತ್ತು ತಾಪಂ ಚುನಾವಣೆಯನ್ನು ಎದರಿಸಲು ಒಗ್ಗಟ್ಟಿನ ಮಂತ್ರವನ್ನು ಜಪಿಸಬೇಕಾಗುತ್ತದೆ.
ರಾಜಕೀಯ ನಿಂತ ನೀರಲ್ಲ. ಹಣೆಬರಹ ಬರೆ ದಿದ್ದರೇ ಚುನಾವಣೆಯಲ್ಲಿ ಏನು ಬೇಕಾದರೂ ಆಗಬಹುದಾಗಿದೆ. ಕ್ಷೇತ್ರದಲ್ಲಿ ಶಾಸಕರಾಗಿರುವವರು ತಾನು ಶಾಸಕರಾಗುತ್ತೇವೆ, ಸಂಸದರಾಗುತ್ತೇವೆಂದು ಬಂದಿಲ್ಲ. ಚುನಾವಣೆ ವೇಳೆಯಲ್ಲಿ ಆಗುವಂತಹ ಬದಲಾವಣೆಯಿಂದ ಯಾರ್ಯಾರಿಗೆ ಅಧಿಕಾರ ಸಿಗಲಿದೆ ಎನ್ನುವುದು ನಿಗೂಢವಾಗಿದ್ದು, ಮುಂಬರುವ ಜಿಪಂ ಚುನಾವಣೆಗೆ ಬೂದಿಕೋಟೆ ಅಥವಾ ಕಾಮಸಮುದ್ರ ಕ್ಷೇತ್ರದಲ್ಲಿ ಅವಕಾಶ ಸಿಕ್ಕಿದರೆ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.-ಕೆ.ಚಂದ್ರಾರೆಡ್ಡಿ, ಬಿಜೆಪಿ ಹಿರಿಯ ಮುಖಂಡ
– ಎಂ. ಸಿ. ಮಂಜುನಾಥ್