Advertisement
ತಾಲೂಕಿನ ಗೊಲ್ಲಹಳ್ಳಿ ಗೇಟ್ ಬಳಿ ಭಾನುವಾರ ನಡೆದ ಸ್ಥಳೀಯ ಮುಖಂಡರ ಸಭೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ ನಲ್ಲಗುಟ್ಟಪಾಳ್ಯ ಗ್ರಾಪಂ ಸದಸ್ಯೆ ಕಾಂತಮ್ಮ ತಿಪ್ಪಾರೆಡ್ಡಿ ಮತ್ತು ಅವರ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿ, ಹೊಸಬರು ಬಂದ ಕಾರಣಕ್ಕೆ ಹಳಬರು ಎದೆಗುಂದಬೇಕಿಲ್ಲ. ಪಕ್ಷದಲ್ಲಿ ಹಿರಿಯ, ಕಿರಿಯ ಎಂಬ ಬೇಧವಿಲ್ಲ. ನದಿಯಲ್ಲಿ ಹಳೇ ನೀರು, ಹೊಸ ನೀರು ಬೆರೆತು ಒಟ್ಟಾಗಿ ಹರಿಯುವಂತೆ ವಲಸಿಗ ಮತ್ತು ಮೂಲ ಎಂಬ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ, ಎಲ್ಲರೂ ಬೆರೆತು ನಡೆಯಬೇಕು. ಹರಿಯೋ ನದಿಯಲ್ಲಿ ನೀರೆಲ್ಲ ಒಂದೇ ಎಂಬ ಮಾತಿನಂತೆ ನಾವೆಲ್ಲ ಮುಂದೆ ಸಾಗೋಣ. ಸರ್ವತೋಮುಖ ಅಭಿವೃದ್ಧಿಗಾಗಿ ಎಲ್ಲರೂ ಕೈ ಜೋಡಿಸೋಣ. ಅಭಿವೃದ್ಧಿ ಪಥದಲ್ಲಿ ಕ್ಷೇತ್ರ ಉತ್ತಂಗ ತಲುಪಲು ಎಲ್ಲರೂ ಕೈ ಜೋಡಿಸುವಂತೆ ಮನವಿ ಮಾಡಿದರು.
Related Articles
Advertisement
ಕಳೆದ 56 ವರ್ಷದಿಂದ ಸುಳ್ಳು ಹೇಳುತ್ತಲೇ ಬಲಹೀನ ವರ್ಗಗಳ ಮತ ಪಡೆದಿದ್ದಾರೆ. ಆದರೆ, ಅವರಿಗೆ ಮೀಸಲಾತಿ ನೀಡಲು ಸಾಧ್ಯವಾಗಲಿಲ್ಲ. 56 ವರ್ಷ ಅಧಿಕಾರ ನಡೆಸಿದವರು ನೀಡದ ಮೀಸಲಾತಿ ಬಿಜೆಪಿ ಸರ್ಕಾರ ನೀಡಿದೆ ಎಂದು ಹೇಳಿದರು.
ಗುರುವಂದನಾ ಕಾರ್ಯಕ್ರಮ: ಮೀಸಲಾತಿಗೆ ಹೋರಾಟ ಮಾಡಿದ ಶ್ರೀಪ್ರಸನ್ನಾನಂದ ಶ್ರೀಗಳಿಗೆ ಜಿಲ್ಲೆಯಲ್ಲಿ ಬೃಹತ್ ಗುರುವಂದನಾ ಕಾರ್ಯಕ್ರಮ ಆಯೋಜಿಸಲಾಗುವುದು. ಇದೇ ಕಾರ್ಯಕ್ರಮದಲ್ಲಿ ಸಿಎಂಗೆ ಅಭಿನಂದನೆ ಸಲ್ಲಿಸಲಾಗುವುದು. ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಮೀಸಲಾತಿ ಸರಿಪಡಿಸಲು ಸಿಎಂ ಶ್ರಮಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಭಾಗವನ್ನು ಕೈಗಾರಿಕಾ ಪ್ರದೇಶ ಮಾಡಲಾಗುವುದು. ಇದಕ್ಕೆ ಅಗತ್ಯ ಭೂಮಿ ವಶಕ್ಕೆ ಪಡೆಯಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜ್, ನಗರಸಭೆ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ (ಬಾಬು), ಮುನಿರಾಜು, ಜೆ.ಕೆ.ರೆಡ್ಡಿ, ಆವುಲಕೊಂಡರಾಯಪ್ಪ, ರಾಜಣ್ಣ, ಮಿಲ್ಟನ್ ವೆಂಕಟೇಶ್, ರಾಮಣ್ಣ, ಮೂರ್ತಿ, ಜಾಲಪ್ಪ, ನರಸಿಂಹಯ್ಯ, ವೆಂಕಟ ರಮಣಪ್ಪ ಹಾಜರಿದ್ದರು.