Advertisement

ಶೇ.33ರಷು ಮೀಸಲಾತಿಗೆ ಬಿಜೆಪಿ ಬೆಂಬಲಿಸಿ

02:44 PM Mar 18, 2023 | Team Udayavani |

ಕೆ.ಆರ್‌.ನಗರ: ವಿಧಾನಸಭೆ ಮತ್ತು ಲೋಕ ಸಭೆಯ ಚುನಾವಣೆಗೆ ಸ್ಪರ್ಧಿಸಲು ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸಲು ಪ್ರಧಾನ ಮಂತ್ರಿ ನರೇಂದ್ರಮೋದಿ ಅವರಿಂದ ಮಾತ್ರ ಸಾಧ್ಯ ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಮಂಗಳಾ ಹೇಳಿದರು.

Advertisement

ಪಟ್ಟಣದ ಎಚ್‌.ಡಿ.ದೇವೆಗೌಡ ಸಮುದಾಯ ಭವನದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾ ಜಿಲ್ಲಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಗ್ರಾಪಂ, ತಾಪಂ, ಜಿಪಂ ನಲ್ಲಿ ಮಹಿಳೆ ಯರಿಗೆ ಶೇ.50ರಷ್ಟು ಮೀಸಲಾತಿ ಒದಗಿಸ ಲಾಗಿದೆ. ಮುಂದಿನ ದಿನಗಳಲ್ಲಿ ಲೋಕಸಭೆ ಮತ್ತು ವಿಧಾನಸಭೆಗೂ ಮೀಸಲಾತಿಗಾಗಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದರು. ಮಹಿಳೆಯರು ಆಸೆ ಆಮಿಷಗಳಿಗೆ ಒಳಗಾ ಗುತ್ತಾರೆ ಎಂಬ ಭಾವನೆ ಈಗ ಬದಲಾಗಿದ್ದು, ಮಹಿಳೆಯರ ಪರವಾಗಿ ಕೆಲಸ ಮಾಡುವಂತಹ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿ, ಹೆಣ್ಣು ಮಕ್ಕಳಿಗಾಗಿ ಭಾಗ್ಯಲಕ್ಷ್ಮೀ ಯೋಜನೆ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಿದ ಕೀರ್ತಿ ಬಿ.ಎಸ್‌.ಯಡಿಯೂರಪ್ಪ ರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ಹೆಣ್ಣು ಮಕ್ಕಳು ಶಿಕ್ಷಿತರಾಗಬೇಕು ಎಂಬ ಉದ್ದೇಶದಿಂದ ಬಿಎಸ್‌ವೈ ಅಧಿಕಾರವಧಿ ಯಲ್ಲಿ ಬೈಸಿಕಲ್‌ ವಿತರಿಸಲಾಯಿತು. ಮಹಿಳೆಯರಿಗೆ ಸಮಾನತೆ ನೀಡಲು, ಬಡತನ ನಿರ್ಮೂಲನೆಗಾಗಿ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುತ್ತಿರುವ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರವನ್ನು ಮುಂಬರುವ ಚುನಾವಣೆಗಳಲ್ಲಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಈ ಕ್ಷೇತ್ರದ ಜನತೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದ ಅಭ್ಯರ್ಥಿಗಳಾಗಲಿರುವ ಡಿ.ರವಿಶಂಕರ್‌ ಮತ್ತು ಸಾ.ರಾ.ಮಹೇಶ್‌ರನ್ನು ಸೋಲಿಸುವ ಮೂಲಕ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿರುವ ಬಿಜೆಪಿಯ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಕೋರಿದರು.

ಪಕ್ಷದ ಶಿಸ್ತು ಸಮಿತಿ ಸದಸ್ಯೆ ರೀನಾಪ್ರಕಾಶ್‌, ವಸ್ತು ಪ್ರದರ್ಶನದ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸಗೌಡ, ರಾಜ್ಯ ವಕ್ತಾರರಾದ ಅಶ್ವಿ‌ನಿ, ಜಿಲ್ಲಾ ಮಾಧ್ಯಮ ಪ್ರಮುಖ್‌ ಎಚ್‌.ಪಿ. ಗೋಪಾಲ್‌, ಜಿಲ್ಲಾ ಮಹಿಳಾ ಮೋರ್ಚಾಧ್ಯಕ್ಷೆ ಮಂಜುಳಾ, ಪ್ರಧಾನ ಕಾರ್ಯದರ್ಶಿ ನಂದಿನಿ, ರಾಜ್ಯ ಪ್ರವಾಸೋ ದ್ಯಮ ಇಲಾಖೆ ನಿರ್ದೇಶಕಿ ಪ್ರಪುಲ್ಲಾಮಲ್ಲಾಡಿ, ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್‌, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ದ್ರಾಕ್ಷಾಯಿಣಿ, ಮಂಡಲ ಅಧ್ಯಕ್ಷ ಕೆ.ವೈ. ಮಂಜು, ಜಿಪಂ ಮಾಜಿ ಸದಸ್ಯೆ ನಳಿನಾಕ್ಷಿವೆಂಕಟೇಶ್‌, ಪುರಸಭೆ ಸದಸ್ಯರಾದ ಕೆ.ಬಿ.ವೀಣಾ, ಜಿ.ಪಿ.ಮಂಜು, ಉಮಾಶಂಕರ್‌ (ಗುಂಡ), ಮಾಧ್ಯಮ ಸಂಚಾಲಕ ನಾಗೇಶ್‌, ಅನಿಲ್‌, ಚಿರಾಗ್‌ಪಟೇಲ್‌ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next