BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್ ಜಾರಕಿಹೊಳಿ; ಬಿವೈವಿ ಆಕ್ರೋಶ
ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಜಾರಕಿಹೊಳಿ ಟೀಕೆ, ನಾಲಿಗೆ ಬಿಗಿ ಹಿಡಿದು ಮಾತಾಡಿ: ಬಿಜೆಪಿ ರಾಜ್ಯಾಧ್ಯಕ್ಷ
Team Udayavani, Jan 16, 2025, 7:43 AM IST
ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬದಲಾವಣೆಗೆ ಹೋರಾಟ ನಡೆಸಿದ್ದ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ, ಈಗ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜ್ಯ ಪ್ರವಾಸದ ವಿರುದ್ಧವೂ ಪತ್ರಿಕಾಗೋಷ್ಠಿಯಲ್ಲಿ ಅಪಸ್ವರವೆತ್ತಿದ್ದಾರೆ.
ಯಡಿಯೂರಪ್ಪ ಬಗ್ಗೆ ಅಪಾರ ಗೌರವವಿದೆ. ರಾಜ್ಯ ಪ್ರವಾಸ ಮಾಡಿದರೆ ಸ್ವಾಗತ. ಆದರೆ ಯಾಕಾಗಿ ಎಂಬುದನ್ನು ಸ್ಪಷ್ಟಪಡಿಸಬೇಕು. ಪಕ್ಷವನ್ನು ಬ್ಲಾ ಕ್‌ಮೇಲ್ ಮಾಡಬಾರದು. ವಿಜಯೇಂದ್ರ ಬೆನ್ನು ಹತ್ತಿದರೆ ನೀವೂ ಹಾಳಾಗುತ್ತೀರಿ. ಮಗನಾಗಿ ನೋಡಬೇಡಿ, ಸೋತಿರುವ ಅಧ್ಯಕ್ಷ ಎಂಬುದಾಗಿ ನೋಡಿ ಎಂದೂ ಸಲಹೆ ನೀಡಿದರು.
ಯಡಿಯೂರಪ್ಪನವರೇ ನಿಮಗೆ ವಯಸ್ಸಾಗಿದೆ. ಪಕ್ಷ ನಿಮಗೆ ಎಲ್ಲವನ್ನೂ ಕೊಟ್ಟಿದೆ. ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕಕ್ಕೆ ಸಹಕಾರ ಕೊಡಿ. ಮಗನ ಸ್ಥಾನ
ಭದ್ರಪಡಿಸಲು ರಾಜ್ಯ ಪ್ರವಾಸ ಮಾಡುತ್ತಿದ್ದೀರಾ ಅಥವಾ ಪಕ್ಷ ಭದ್ರಗೊಳಿಸಲು ಮಾಡುತ್ತಿದ್ದೀರೋ ಎಂಬುದನ್ನು ಸ್ಪಷ್ಟ ಪಡಿಸಬೇಕು ಎಂದು ಆಗ್ರಹಿಸಿದರು.
ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಹೋರಾಟ ಮಾಡಿದ್ದು ನಿಜ. ಈ ಬಗ್ಗೆ ವರಿಷ್ಠರು ಕೈಗೊಳ್ಳುವ ನಿರ್ಣಯಕ್ಕೆ ಬದ್ಧರಾಗಿ ದ್ದೇವೆ. ರಾಜ್ಯದಲ್ಲಿ ವಕ್ಫ್ ವಿರುದ್ಧ 3 ಹಂತದ ಹೋರಾಟ ಮುಗಿದಿದೆ. ನಾಲ್ಕನೇ ಹಂತದ ಹೋರಾಟಕ್ಕಾಗಿ ಬೆಂಗಳೂರಿನಲ್ಲಿ ಸೇರಿ ಚರ್ಚಿಸುತ್ತೇವೆ. ಬಿಜೆಪಿ ಸರಕಾರ ಅಸ್ತಿತ್ವಕ್ಕೆ ತರಲು ಕೆಲಸ ಮಾಡುತ್ತಿದ್ದೇವೆ ಎಂದರು.
ನಾಲಿಗೆ ಬಿಗಿ ಹಿಡಿದು ಮಾತಾಡಿ: ಬಿ.ವೈ.ವಿಜಯೇಂದ್ರ
ಕೊಪ್ಪಳ: ಬಿ.ಎಸ್.ಯಡಿಯೂರಪ್ಪ ಹಳ್ಳಿಹಳ್ಳಿ ಯಲ್ಲಿ ಓಡಾಡಿ ಪಕ್ಷ ಕಟ್ಟಿದ್ದಾರೆ. ಹೊಸದಾಗಿ ಪಕ್ಷಕ್ಕೆ ಬಂದಿರುವ ಶಾಸಕ ರಮೇಶ ಜಾರಕಿಹೊಳಿ ಎಚ್ಚರಿಕೆಯಿಂದ ಮಾತನಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ರಮೇಶ ಬಾಯಿ ಹಿಡಿತದಲ್ಲಿಟ್ಟು ಮಾತನಾಡಬೇಕು. ಸಮಸ್ಯೆ ಇದ್ದರೆ ವರಿಷ್ಠರ ಜತೆ ಮಾತನಾಡಲಿ, ಬಹಿರಂಗ ಹೇಳಿಕೆ ಸರಿಯಲ್ಲ. ಈ ರೀತಿ ಮಾತನಾಡಿದರೆ ಜನರು ಸುಮ್ಮನೆ ಬಿಡೋದಿಲ್ಲ. ಜಾರಕಿಹೊಳಿ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಕೆಲವೇ ದಿನಗಳಲ್ಲಿ ಪಕ್ಷದಲ್ಲಿ ಎಲ್ಲವೂ ಸರಿಹೋಗುತ್ತದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಂದರ್ಭ ಬಂದಿದೆ. ಅನುದಾನ ಸಿಗದೆ ಶಾಸಕರಿಗೆ ಕ್ಷೇತ್ರದಲ್ಲಿ ಓಡಾಡಲು ಆಗದ ಸ್ಥಿತಿಯಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಾಣಂತಿ ಸಾವು ಪ್ರಕರಣ… ಶವಾಗಾರದ ಎದುರು ಕುಟುಂಬಸ್ಥರ ಪ್ರತಿಭಟನೆ
ಚಿನ್ನ ಕಸಿಯಲು ಬಂದ ದುಷ್ಕರ್ಮಿಯಿಂದ ಮಹಿಳೆಗೆ ರಾಡ್ ನಿಂದ ಹಲ್ಲೆ: ಆಸ್ಪತ್ರೆಗೆ ದಾಖಲು
ಬಾಣಂತಿಯರ ಸಾವಿನ ಪ್ರಕರಣ ಮಾಸುವ ಮುನ್ನವೇ ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾ*ವು
ಈ ಜಾಗ ನಮ್ಮದು… ವಿದ್ಯಾರ್ಥಿಗಳನ್ನು ಹೊರಹಾಕಿ ಶಾಲೆಗೆ ಬೀಗ ಜಡಿಯಲು ಯತ್ನಿಸಿದ ಕುಟುಂಬ
ಮೈಕ್ರೋ ಫೈನಾನ್ಸ್ ಗಳಿಂದ ಆರ್ಥಿಕ ಕ್ಷೇತ್ರ ಹಿಂಸಾತ್ಮಕ ವಾತಾವರಣವಾಗಿ ಬದಲಾಗುತ್ತಿದೆ
MUST WATCH
ಹೊಸ ಸೇರ್ಪಡೆ
Uttar Pradeshದಲ್ಲಿ ಮತ್ತೊಂದು ದುರಂತ: ಲಡ್ಡು ಮಹೋತ್ಸವದಲ್ಲಿ ಕಾಲ್ತುಳಿತ-7 ಮಂದಿ ಸಾ*ವು
Belagavi: ಬಾಣಂತಿ ಸಾವು ಪ್ರಕರಣ… ಶವಾಗಾರದ ಎದುರು ಕುಟುಂಬಸ್ಥರ ಪ್ರತಿಭಟನೆ
BBK11: ಹನುಮಂತುಗೆ 5 ಕೋಟಿ ವೋಟ್ಸ್ ಕೂಡ ಕಡಿಮೆನೇ.. ತ್ರಿವಿಕ್ರಮ್
ಚಿನ್ನ ಕಸಿಯಲು ಬಂದ ದುಷ್ಕರ್ಮಿಯಿಂದ ಮಹಿಳೆಗೆ ರಾಡ್ ನಿಂದ ಹಲ್ಲೆ: ಆಸ್ಪತ್ರೆಗೆ ದಾಖಲು
Mangaluru: ನೆತ್ತರಕೆರೆ ಸಿನಿಮಾ ಚಿತ್ರೀಕರಣದ ಸೆಟ್ ನಲ್ಲಿ ಅಗ್ನಿ ಅವಘಡ…