Advertisement

BJP ಚುನಾವಣೆಗೆ ಸಿದ್ಧತೆ: ನಾಡಿದ್ದು ಅರುಣ್‌ ಸಿಂಗ್‌ ಸಮ್ಮುಖ ಹಿರಿಯರ ಸಭೆ

12:57 AM Jan 06, 2024 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆ ಸಿದ್ಧತೆಗೆ ಸಂಬಂಧಿಸಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಉಪಸ್ಥಿತಿಯಲ್ಲಿ ಸೋಮವಾರ ಬಿಜೆಪಿ ಹಿರಿಯ ನಾಯಕರ ಮಹತ್ವದ ಸಭೆ ನಡೆಯ ಲಿದೆ. ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿ ನಡೆಯುವ ಮೊದಲ ಸಭೆ ಇದು. ಈ ಮೂಲಕ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಬಿರುಸಾಗಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ, ವಿಪಕ್ಷ ನಾಯಕ ಆರ್‌. ಅಶೋಕ್‌, ಉಪನಾಯಕ ಸುನಿಲ್‌ ಕುಮಾರ್‌, ಮಾಜಿ ಸಚಿವರಾದ ಸಿ.ಟಿ. ರವಿ, ಶ್ರೀರಾಮುಲು ಸೇರಿದಂತೆ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ.

Advertisement

ಬಿಜೆಪಿ ಮೂಲಗಳ ಪ್ರಕಾರ ಸುಮಾರು 8ರಿಂದ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬದಲಾಯಿಸಬೇಕಿದೆ. ಆದರೆ ಅರ್ಹರ ಕೊರತೆ ಇದೆ. ಹೀಗಾಗಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕಿದೆ. ಈ ಬಗ್ಗೆ ಸಭೆಯಲ್ಲಿ ಪ್ರಾಥಮಿಕ ಚರ್ಚೆ ನಡೆಯಲಿದೆ.

ಫೆಬ್ರವರಿ ಮಧ್ಯಭಾಗದ ಹೊತ್ತಿಗೆ ಅಭ್ಯರ್ಥಿ ಯಾರು ಎಂಬ ಆಂತರಿಕ ಮಾಹಿತಿಯನ್ನು ನೀಡು ವಂತೆ ರಾಜ್ಯ ಘಟಕದಿಂದ ಈಗಾಗಲೇ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಕೊನೆಯ ಹಂತ ದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದರೆ ವಿಧಾನಸಭಾ ಚುನಾವಣೆಯಲ್ಲಿ ಆದಂತೆ ಗೊಂದಲ ಸೃಷ್ಟಿಯಾಗಬಹುದು. ಹೀಗಾಗಿ ಮುಂಚಿತವಾಗಿ ನಿರ್ಧಾರ ಮಾಡಿ ಎಂಬ ಸಲಹೆಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಹತ್ವವೇನು?
ಲೋಕಸಭೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿ ಬಿಜೆಪಿಯ ಮೊದಲ ಸಭೆ ಇದು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಿಎಂಗಳಾದ ಬಿಎಸ್‌ವೈ, ಡಿವಿಎಸ್‌, ಬೊಮ್ಮಾಯಿ ಭಾಗಿ.
ಅರ್ಹ ಅಭ್ಯರ್ಥಿಗಳ ಕೊರತೆಯನ್ನು ನೀಗಿಸಲು ಗಂಭೀರ ಚರ್ಚೆ?

Advertisement

Udayavani is now on Telegram. Click here to join our channel and stay updated with the latest news.

Next