Advertisement

ಮತ್ತೂಂದು “ಆಪರೇಷನ್‌”ಗೆ BJP ಸಿದ್ಧತೆ?- ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಬಗ್ಗೆ ಚರ್ಚೆ ?

11:19 PM Jan 30, 2024 | Team Udayavani |

ಬೆಂಗಳೂರು: ಮಾಜಿ ಸಚಿವ ಬಿ.ಶ್ರೀರಾಮುಲು ಅವರು ದಿಲ್ಲಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದು, ಬಿಜೆಪಿ ಮತ್ತೂಂದು ಆಪರೇಷನ್‌ಗೆ ಸಿದ್ಧವಾಗಿದೆಯೇ ? ಎಂಬ ಅನುಮಾನ ಸೃಷ್ಟಿಸಿದೆ.

Advertisement

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಮರಳಿ ಪಕ್ಷಕ್ಕೆ ಕರೆತರುವ ವಿಚಾರಕ್ಕೆ ಸಂಬಂಧಪಟ್ಟಂತೆ ಶ್ರೀರಾಮುಲು ಅವರು ಅಮಿತ್‌ ಶಾ ಹಾಗೂ ನಡ್ಡಾ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂಬ ಚರ್ಚೆ ಬಿಜೆಪಿ ವಲಯದಲ್ಲಿ ಜೋರಾಗಿ ನಡೆಯುತ್ತಿದೆ. ಮೂಲಗಳ ಪ್ರಕಾರ ಪಕ್ಷಕ್ಕೆ ವಾಪಸ್‌ ಆಗುವ ವಿಚಾರಕ್ಕೆ ಸಂಬಂಧಪಟ್ಟಂತೆ ಅಮಿತ್‌ ಶಾ ಅವರಿಂದ ಕೆಲವು ಭರವಸೆ ಬೇಕು ಎಂಬ ಕರಾರನ್ನು ಜನಾರ್ದನ ರೆಡ್ಡಿ ಹಾಕಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಮುಲು ಭೇಟಿ ಮಹತ್ವ ಪಡೆದುಕೊಂಡಿದೆ.

ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿದೆ ಎಂದು ಶ್ರೀರಾಮುಲು ಅವರೇ ಎಕ್ಸ್‌ ಖಾತೆಯಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಇದೊಂದು ಸೌಹಾರ್ದಯುತ ಭೇಟಿಯಾಗಿದ್ದು, ಪ್ರಸಕ್ತ ರಾಜಕೀಯ ವಿದ್ಯಮಾನಗಳು ಹಾಗೂ ಕರ್ನಾಟಕದಲ್ಲಿ ಪಕ್ಷದ ಸಂಘಟನೆ ಕುರಿತಾಗಿ ಮಾಹಿತಿ ಪಡೆದುಕೊಂಡರು. ಅವರ ಭೇಟಿ ನನಗೆ ಸಾಕಷ್ಟು ಬಲ ತಂದಿದೆ ಎಂದು ಬರೆದುಕೊಂಡಿದ್ದಾರೆ.

ಮೂರನೇ ಅವಧಿಗೆ ಮೋದಿ ಅವರನ್ನು ಪ್ರಧಾನಿ ಮಾಡಲು ಕರ್ನಾಟಕದಿಂದ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ರಾಜ್ಯದ ಎಲ್ಲಾ 28 ಸ್ಥಾನಗಳಲ್ಲಿ ಜಯ ಸಾಧಿಸಲು ರೂಪಿಸಬೇಕಾದ ಕಾರ್ಯತಂತ್ರ, ಜೆಡಿಎಸ್‌ ಜತೆಗಿನ ಹೊಂದಾಣಿಕೆ, ಸೇರಿದಂತೆ ಹಲವು ವಿಷಯಗಳ ಬಗ್ಗೆ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜತೆ ಚರ್ಚೆ ನಡೆಸಿದ್ದೇನೆ ಎಂದು ರಾಮುಲು ಬರೆದುಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next