Advertisement

ಸ್ಮೃತಿ ಪರ ಅಮೇಥಿಯಲ್ಲಿ ಅಮಿತ್‌ ಶಾ ಭರ್ಜರಿ ರೋಡ್‌ ಶೋ

09:23 AM May 06, 2019 | Team Udayavani |

ಅಮೇಥಿ:ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಕಣಕ್ಕಿಳಿದಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪರ ಶನಿವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ಭರ್ಜರಿ ರೋಡ್‌ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದ್ದಾರೆ.

Advertisement

ಶಾ ಅವರು ಹಾಲಿ ಸಂಸದ ರಾಹುಲ್‌ ಗಾಂಧಿ ವಿರುದ್ಧ ತೀವ್ರ ವಾಗ್‌ಧಾಳಿ ನಡೆಸಿ ಈ ಬಾರಿ ಅವರನ್ನು ಸೋಲಿಸಿ ಕ್ಷೇತ್ರದ ಅಭಿವೃದ್ಧಿಗೆ ಕಾರಣರಾಗಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಶಾ, ಈ ಬಾರಿ ಅಮೇಥಿಯಲ್ಲಿ ಬಿಜೆಪಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಮೇಥಿ ದೇಶದ ಗಮನ ಸೆಳೆದಿರುವ ಕ್ಷೇತ್ರವಾಗಿದ್ದು, ಭಾರೀ ಜಿದ್ದಾಜಿದ್ದಿನ ಪ್ರಚಾರಗಳು ನಡೆಯುತ್ತಿವೆ. ರಾಹುಲ್‌ ಗಾಂಧಿ ಪರ ಪ್ರಭಾವೀ ಕಾಂಗ್ರೆಸ್‌ ನಾಯಕರು, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಚಾರ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next