Advertisement

BJP; ಬೆಳಗಾವಿಗೆ ಆಗಮಿಸಿದ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ

11:34 AM Mar 05, 2024 | Team Udayavani |

ಬೆಳಗಾವಿ: ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಳಗಾವಿಗೆ ಮಂಗಳವಾರ ಬೆಳಿಗ್ಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪಕ್ಷದ ನಾಯಕರು ಆತ್ಮೀಯ ಸ್ವಾಗತ ನೀಡಿದರು.

Advertisement

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಡ್ಡಾ ಅವರಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಂಸದೆ ಮಂಗಳಾ ಅಂಗಡಿ, ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಮೊದಲಾದವರು ಸ್ವಾಗತ ನೀಡಿದರು.

ನಂತರ ಚಿಕ್ಕೋಡಿಗೆ ತೆರಳಿದ ನಡ್ಡಾ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬಳಿಕ ಬೆಳಗಾವಿಯಲ್ಲಿ ನಾಲ್ಕು ಜಿಲ್ಲೆಗಳ ಕೋರ್ ಕಮಿಟಿ ಸಭೆ ಹಾಗೂ ಪ್ರಬುದ್ಧರ ಜೊತೆ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next