Advertisement

ಸರ್ಕಾರದ ಭಷ್ಟಾಚಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಲಿ:

06:25 PM Apr 17, 2022 | Team Udayavani |

ಬೆಂಗಳೂರು: ಬಿಟ್‌ ಕಾಯಿನ್‌ ಸೇರಿದಂತೆ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಲಿ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಆಗ್ರಹಿಸಿದ್ದಾರೆ.

Advertisement

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಪ್ರಕರಣದ ಬಗ್ಗೆ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಲೇ ಇಲ್ಲ. ಕೆ.ಎಸ್‌. ಈಶ್ವರಪ್ಪ ಅವರ ಬಗ್ಗೆ ನಿಮಗೆ ಹೆದರಿಕೆ ಏಕೆ ಎಂದು ಪ್ರಶ್ನಿಸಿದರು. ಬಿಟ್‌ ಕಾಯಿನ್‌ ಸೇರಿದಂತೆ ಬಿಜೆಪಿ ಸರ್ಕಾರ ಎಲ್ಲಾ ಹಗರಣಗಳ ಬಗ್ಗೆ ಮಾತನಾಡಲಿ ಎಂದು ಒತ್ತಾಯಿಸಿದರು.

ಕೆ.ಎಸ್‌.ಈಶ್ವರಪ್ಪ ಪ್ರಕರಣ ಸೇರಿದಂತೆ ರಾಜ್ಯದಲ್ಲಿರುವ 40 ಪರ್ಸೆಂಟೇಜ್‌ ಸರ್ಕಾರದ ಬಗ್ಗೆ ಕಾಂಗ್ರೆಸ್‌ ಮುಖಂಡರು ಹೋರಾಟ ಮಾಡುತ್ತಲೇ ಇದ್ದಾರೆ. ಆದರೆ, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಪ್ರತಿಕ್ರಿಯೆ ನೀಡುತ್ತಿಲ್ಲ. ಈಶ್ವರಪ್ಪ ಅವರ ಬಗ್ಗೆ ನಿಮಗೆ ಭಯವಿರಬಹುದು. ಅವರು ರಾಜೀನಾಮೆ ನೀಡಿದ್ದಾರೆ ಈಗಲಾದರೂ ಮಾತನಾಡಿ ಎಂದು ಹೇಳಿದರು.

ಗಂಗ ಕಲ್ಯಾಣ ಯೋಜನೆಯಡಿ ಅವ್ಯವಹಾರ ನಡೆದಿರುವುದರ ಬಗ್ಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಹೊಸಪೇಟೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಇಲಾಖೆಯಲ್ಲಿ ಶೂನ್ಯ ಭ್ರಷ್ಟಾಚಾರ ಎಂದಿದ್ದಾರೆ. ಹಾಗಾದರೆ ಉಳಿದ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬುವುದು ಅವರ ಆ ಮಾತಿನಿಂದ ಅರ್ಥವಾಗುತ್ತಿದೆ ಎಂದರು.

ಗಲಾಟೆಗಳು ಸಿಎಂ, ಗೃಹಸಚಿವರ ಊರುಗಳಲ್ಲೆ ಏಕೆ?
ರಾಜ್ಯದಲ್ಲಿ ನಡೆಯುತ್ತಿರುವ ಗಲಾಟೆಗಳು ಕೇವಲ ಗೃಹಸಚಿವರ ತವರೂರು ಶಿವಮೊಗ್ಗ ಮತ್ತು ಮುಖ್ಯಮಂತ್ರಿಗಳ ಊರು ಹುಬ್ಬಳ್ಳಿ-ಧಾರವಾಡದಲ್ಲೆ ಏಕೆ ಆಗುತ್ತಿವೆ ಎಂದು ಪ್ರಶ್ನಿಸಿದ ಪ್ರಿಯಾಂಕ್‌ ಖರ್ಗೆ, ಇದು ಸರ್ಕಾರದ ಗುಪ್ತಚರ ಇಲಾಖೆಯ ವೈಫ‌ಲ್ಯವನ್ನು ಎತ್ತಿ ತೋರಿಸುತ್ತಿದೆ ಎಂದು ಟೀಕಿಸಿದರು.

Advertisement

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ತವರೂರಲ್ಲೆ ನಡೆದಿರುವುದನ್ನು ನೋಡಿದರೆ ಸರ್ಕಾರ ಎಷ್ಟರ ಮಷ್ಟರ ಮಟ್ಟಿಗೆ ಕಾನೂನು ಸುವ್ಯವಸ್ಥೆ ಹದ್ದುಬಸ್ತಿನಲ್ಲಿಟ್ಟಿದೆ ಎಂಬುವುದನ್ನು ತೋರಿಸುತ್ತಿದೆ ಎಂದು ಲೇವಡಿ ಮಾಡಿದರು.

ರಾಜ್ಯದಲ್ಲಿ ನಡೆದಿರುವ ಪಿಎಸ್‌ಐ ಹುದ್ದೆಗಳ ಹಗರಣ, ಆರೋಗ್ಯ ಇಲಾಖೆಯ ಬೆಡ್‌ ಹಗರಣಗಳನ್ನು ಎನ್‌ಐಎ ಅಥವಾ ಸಿಬಿಐಗೆ ವಹಿಸಲಿ ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next