ಬಿಹಾರ: ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ದೇಶಾದ್ಯಂತ ಚುನಾವಣಾ ಕಾವು ಹೆಚ್ಚುತ್ತಿರುವ ಬೆನ್ನಲ್ಲೇ ಬಿಹಾರದಲ್ಲಿ 2025 ರ ರಾಜ್ಯ ವಿಧಾನಸಭಾ ಚುನಾವಣೆಗೆ ಮೊದಲು 10 ಲಕ್ಷ ಸರ್ಕಾರಿ ಉದ್ಯೋಗಗಳ ಭರವಸೆಯನ್ನು ಬಿಜೆಪಿ ನೀಡಿದೆ.
10 ಲಕ್ಷ ಉದ್ಯೋಗಗಳನ್ನು ಒದಗಿಸುವ ಭರವಸೆಯನ್ನು ಈಡೇರಿಸಲು ರಾಜ್ಯ ಸರ್ಕಾರ ಆಕಾಂಕ್ಷೆ ಹೊಂದಿದೆ ಎಂದು ಬಿಹಾರ ಬಿಜೆಪಿ ಮುಖ್ಯಸ್ಥ ಮತ್ತು ರಾಜ್ಯ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಶುಕ್ರವಾರ ಹೇಳಿದ್ದಾರೆ. ಪ್ರಸಕ್ತ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಯಾವುದೇ ರಾಜ್ಯದಲ್ಲಿ ಉದ್ಯೋಗದ ಭರವಸೆಯ ಬಗ್ಗೆ ಮಾತನಾಡಿರುವುದು ಬಿಜೆಪಿ ಇದೇ ಮೊದಲು ಎನ್ನಲಾಗಿದೆ.
ಹತ್ತು ಲಕ್ಷ ಸರ್ಕಾರಿ ಉದ್ಯೋಗಗಳ ಮೈಲಿಗಲ್ಲನ್ನು ಸಾಧಿಸಲು ಸಮಯದ ಚೌಕಟ್ಟನ್ನು ನಿಗದಿಪಡಿಸಿದ ಚೌಧರಿ, 2025 ರ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಗುರಿಯನ್ನು ಸಾಧಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ತರಾಟೆಗೆ ತೆಗೆದುಕೊಂಡ ಚೌಧರಿ, “ಇದು ಲಾಲು ಅವರ ಸರ್ಕಾರವಲ್ಲ, ಅವರ ಕಾರ್ಯಗಳು ಅವರ ಮಾತಿಗೆ ಹೊಂದಿಕೆಯಾಗುವುದಿಲ್ಲ” ಎಂದು ಕಿಡಿಕಾರಿದರು. ಉದ್ಯೋಗ ಭರವಸೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಲಾಗುದು ಅಲ್ಲದೆ ನೀಡಿರುವ ಭರವಸೆಯನ್ನು ಈಡೇರಿಸುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ.
ಇದನ್ನೂ ಓದಿ: Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ