Advertisement

ರಮೇಶ್ ಕುಮಾರ್ ವಿರುದ್ಧ ಬಿಜೆಪಿ ನಾರಿಯರ ಆಕ್ರೋಶ

03:39 PM Dec 21, 2021 | Team Udayavani |

ಬೆಳಗಾವಿ: ವಿಧಾನಮಂಡಲ ಚಳಿಗಾಲ ಅಧಿವೇಶನದ ಸದನದಲ್ಲಿ ಕಾಂಗ್ರೆಸ್‌ ಶಾಸಕ ಕೆ.ಆರ್‌. ರಮೇಶಕುಮಾರ್‌ ಮಹಿಳೆಯರ ಬಗ್ಗೆ ನೀಡಿರುವ ಅತ್ಯಾಚಾರ ಹೇಳಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ಮಹಿಳೆಯರನ್ನು ಗೌರವದಿಂದ ಕಾಣುವ ಭಾರತದಲ್ಲಿ ಜನಪ್ರತಿನಿಧಿಯಾಗಿ ಇಂಥ ಹೇಳಿಕೆ ನೀಡಿರುವುದು ಮಹಿಳಾ ಕುಲಕ್ಕೆ ಅವಮಾನ ಮಾಡಿದಂತಾಗಿದೆ. ಮಹಿಳೆಯರು ತಲೆ
ತಗ್ಗಿಸುವಂಥ ಹೇಳಿಕೆ ನೀಡಿದ್ದಾರೆ. ಹೀಗಾಗಿ ಶಾಸಕ ರಮೇಶಕುಮಾರರಾಜೀನಾಮೆನೀಡಬೇಕುಎಂದು ಆಗ್ರಹಿಸಿದರು. ಮಹಿಳೆಯನ್ನು ಅವಮಾನಿಸುವ ರೀತಿಯಲ್ಲಿ ಶಾಸಕ ರಮೇಶಕುಮಾರ ಹೇಳಿಕೆ ಅಕ್ಷಮ್ಯ ಅಪರಾಧವಾಗಿದೆ. ಶಾಸಕ ಸ್ಥಾನಕ್ಕೆ ರಮೇಶಕುಮಾರ ರಾಜೀನಾಮೆ ನೀಡಬೇಕು. ಮಹಿಳೆಯರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಶಾಸಕ ರಮೇಶ್‌ಕುಮಾರ್‌ ರಾಜೀನಾಮೆಗೆ ಒತ್ತಾಯಿಸಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಕಾರ್ಯಕರ್ತೆಯರನ್ನು ಹಲಗಾ ಬ್ರಿಡ್ಜ್ ಬಳಿ ಪೊಲೀಸರು ತಡೆದರು.
ಮಹಿಳೆಯರುಕೆಲ ಹೊತ್ತು ರಸ್ತೆ ಮೇಲೆಯೇಕುಳಿತು ಪ್ರತಿಭಟಿಸಿದರು.

ವಿಧಾನ ಪರಿಷತ್‌ ಸದಸ್ಯೆ ಭಾರತಿ ಶೆಟ್ಟಿ, ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪ್ರೇಮಾ ಭಂಡಾರಿ, ಬಿಜೆಪಿ ಗ್ರಾಮಾಂತರ ಉಪಾಧ್ಯಕ್ಷೆ ಡಾ| ಸೋನಾಲಿ ಸರ್ನೋಬತ್‌, ನಗರ ಅಧ್ಯಕ್ಷೆ
ಸುವರ್ಣಾ ಪಾಟೀಲ, ರೇಖಾ ಚಿನ್ನಾಕಟ್ಟಿ, ಶಾಂಭವಿ ಅಶ್ವತ್ಥಪುರ ಸೇರಿದಂತೆ ಇತರರು ಇದ್ದರು.

ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆಯಿರಿ: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರವೂ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು. ವಿದ್ಯುತ್‌ ಖಾಸಗೀಕರಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದವರು ಪ್ರತಿಭಟನೆ ನಡೆಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next