Advertisement

ಮತ್ತೆ ಕೈ-ಕಮಲ ಟಿಪ್ಪು ಸಮರ

05:59 AM Oct 17, 2018 | Team Udayavani |

ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ವಿಷಯದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರು ಮಾತಿನ ಸಮರ ಆರಂಭಿಸಿದ್ದಾರೆ. ಟಿಪ್ಪು ಜಯಂತಿ ಆಚರಣೆ ಮಾಡುವ ಮೂಲಕ ರಾಜ್ಯ ಸರ್ಕಾರ ಸಮಾಜದಲ್ಲಿ ಒಡಕು ಉಂಟು ಮಾಡುವ ಪ್ರಯತ್ನ ಮಾಡುತ್ತಿದೆ. ಈ ಬಾರಿ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡಲು ಬಿಡುವುದಿಲ್ಲ ಎಂದು ಶಾಸಕ ಕೆ.ಎಸ್‌.ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.

Advertisement

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡುವ
ಮೂಲಕ ಪದೇ ಪದೆ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದೆ. ಟಿಪ್ಪು ಜಯಂತಿ ಆಚರಣೆ ಮೂಲಕ ಕೊಲೆ, ದಂಗೆ 
ಯಂತಹ ಪ್ರಕರಣಗಳಿಗೆ ಪ್ರಚೋದನೆ ನೀಡುತ್ತಿದೆ. ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ಆಚರಣೆ ಮಾಡಬಾರದು. ಒಂದೊಮ್ಮೆ ಆಚರಣೆಗೆ ಮುಂದಾದರೆ ಪತ್ರಿಪಕ್ಷ ವಾಗಿ ನಾವು ಏನು ಮಾಡಬೇಕೋ ಮಾಡುತ್ತೇವೆ ಎಂದು ಹೇಳಿದರು.

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾತನಾಡಿ, ರಾಜ್ಯದಲ್ಲಿ ಟಿಪ್ಪು ಖಡ್ಗ ಹಿಡಿದು ಕೊಂಡವರೆಲ್ಲಾ ಏನಾದರು
ಎನ್ನುವುದು ಗೊತ್ತಿದೆ. ಟಿಪ್ಪು ಟೋಪಿ ಹಾಕಿಕೊಂಡವರೆಲ್ಲ ಅಧಿಕಾರ ಕಳೆದುಕೊಂಡಿದ್ದಾರೆ. ಟಿಪ್ಪು ಜಯಂತಿ ಆಚರಣೆಯಿಂದಲೇ ಈ ಸರ್ಕಾರ ಪತನವಾಗಲಿದೆ ಎಂದು ತಿಳಿಸಿದರು. ಈ ಮಧ್ಯೆ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್, ಬಿಜೆಪಿ ಟಿಪ್ಪು ವಿಷಯದಲ್ಲಿ ಅನಗತ್ಯ ರಾಜಕಾರಣ ಮಾಡಬಾರದು. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಟಿಪ್ಪು ವೇಷ ಹಾಕಿರುವ ನಾಯಕರನ್ನು ನೋಡಿದ್ದೇವೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next