Advertisement

BJP Protest: ಚಿಕ್ಕಮಗಳೂರು: ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

03:57 PM Oct 16, 2023 | Team Udayavani |

 

Advertisement

ಚಿಕ್ಕಮಗಳೂರು: ರಾಜ್ಯ ಸರ್ಕಾರದ ವಿರುದ್ದ ನಗರದ ಬೇಲೂರು ರಸ್ತೆಯ ಆಜಾದ್ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದರು.

ಬಿಜೆಪಿ ಕಚೇರಿ ಪಾಂಚಜನ್ಯದಿಂದ ಪ್ರತಿಭಟನಾ ಮೆರವಣಿಗೆ ಹೊರಟಿದ್ದು, ಕಾಂಗ್ರೆಸ್ ನೇತೃತ್ವದ ಭ್ರಷ್ಟಾಚಾರದ ವಿರುದ್ಧ ಬಿಜೆಪಿಗರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಆಜಾದ್ ಪಾರ್ಕ್ ನಲ್ಲಿ ಬಿಜೆಪಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ್ದರಲ್ಲದೇ ಎಟಿಎಂ ಸರ್ಕಾರವನ್ನು ವಜಾ ಗೊಳಿಸುವಂತೆ ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟಿಸಿ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಪ್ರತಿಭಟನೆಯಿಂದ ಆಜಾದ್ ಪಾರ್ಕ್ ಬಳಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next