Advertisement

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

11:18 AM Jun 17, 2024 | Team Udayavani |

ಮಂಗಳೂರು: ರಾಜ್ಯ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಮಂಗಳೂರಿನಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

Advertisement

ಇಂದು ಬೆಳಿಗ್ಗೆ ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿ ಎದುರು ಜಮಾವಣೆಗೊಂಡ ಕಾರ್ಯಕರ್ತರು ಬಿಜೆಪಿ ಕಚೇರಿಯಿಂದ ಪೆಟ್ರೋಲ್ ಪಂಪ್ ನವರೆಗೆ ಕಾರಿಗೆ ಹಗ್ಗ ಕಟ್ಟಿ ಎಳೆದುಕೊಂಡು ಹೋಗಿ ಪ್ರತಿಭಟನೆ ನಡೆಸಿದರು, ಈ ವೇಳೆ ಕೆಲ ಕಾರ್ಯಕರ್ತರು ಕೈಯಲ್ಲಿ ಗೆರಟೆ, ಖಾಲಿ ಚೆಂಬು ಪ್ರದರ್ಶಿಸಿದರು, ಮಹಿಳೆಯರು ದ್ವಿಚಕ್ರ ವಾಹನ ದೂಡಿಕೊಂಡು ಹೋಗುವ ಮೂಲಕ ಪ್ರತಿಭಟನೆಗೆ ಸಾಥ್ ನೀಡಿದರು.

ಪ್ರತಿಭಟನೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಪ್ರತಾಪಸಿಂಹ ನಾಯಕ್, ವಿಧಾನ ಪರಿಷತ್ ಮಾಹಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪ್ರೇಮಾನಂದ ಶೆಟ್ಟಿ ಮೊದಲಾದವರು ಭಾಗಿಯಾಗಿದ್ದರು.

Advertisement

ಇದನ್ನೂ ಓದಿ: Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

Advertisement

Udayavani is now on Telegram. Click here to join our channel and stay updated with the latest news.

Next