Advertisement

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

12:29 PM Jun 17, 2024 | Team Udayavani |

ಉಡುಪಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಸೋಮವಾರ ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಕಚೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು.

Advertisement

ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, 2023 ರ ಚುನಾವಣೆಗೆ ಬಿಟ್ಟಿ ಆಮಿಷ ನೀಡಿ ಕಾಂಗ್ರೆಸ್ ಸರಕಾರಕ್ಕೆ ಬಂದಿದೆ. ಸರಕಾರ ಬಂದ ಬಳಿಕ ನೀಡಿದ ಭರವಸೆಗಳನ್ನು ನೀಡದೆ ಜನರನ್ನು ವಂಚಿಸಲಾಗಿದೆ. ಇದು ಪಕ್ಷದ ಪ್ರತಿಭಟನೆಯಲ್ಲಿ ಸಾಮಾನ್ಯ ಜನರ ಸಮಸ್ಯೆ. ಜನರ ಪರ ಪ್ರತಿಭಟನೆಗೂ ಸರಕಾರ ಅನುಮತಿ ನೀಡಿಲ್ಲ.

ಸಾಮಾನ್ಯ ಜನರ ಬಗ್ಗೆ ಸರಕಾರಕ್ಕೆ ಕಾಳಜಿ ಇಲ್ಲದಂತಾಗಿದೆ. ಹಾಲಿನ ಪ್ರೋತ್ಸಾಹ ಧನವನ್ನೂ ನೀಡುತ್ತಿಲ್ಲ. ಪ್ರತೀ ಬಾರಿಯೂ ಕೇಂದ್ರ ಸರಕಾರವನ್ನು ಟೀಕಿಸುವ ಕೆಲಸ ರಾಜ್ಯ ಸರಕಾರದಿಂದ ನಡೆಯುತ್ತಿದೆ. ಮುಂದಿನ ದಿನದಲ್ಲಿ ಜನರು ಭಿಕ್ಷೆ ಬೇಡುವ ಸ್ಥಿತಿಯೂ ದೂರವಿಲ್ಲ. ಚೊಂಬು ಕೊಟ್ಟವರು ಕಾಂಗ್ರೆಸ್ ಸರಕಾರ. ಚೊಂಬು ನೀಡಿ ಜನರು ಭಿಕ್ಷೆ ಬೇಡುವಂತೆ ಮಾಡಲಾಗಿದೆ. ಇಂಧನ ದರ ಇಳಿಕೆ ಮಾಡದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದರು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಇಂಧನ ಹೆಚ್ಚಳವಾದರೆ ಎಲ್ಲ ವಸ್ತುಗಳ ಬೆಲೆ ಏರಿಕೆ ಆಗಲಿದೆ. ಜನಪ್ರತಿನಿಧಿಗಳಿಗೆ ಸರಕಾರದ ಯಾವುದೇ ಫಂಡ್ ಬಾರದೆ ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಿದೆ. ಜನರಿಗೆ ಅನ್ಯಾಯ ಮಾಡುತ್ತಾ ಸರಕಾರ ಕಾಲಹರಣ ಮಾಡುತ್ತಿದೆ. ಸರಕಾರ ನಡೆಸಲು ಸಾಧ್ಯವೇ ಇಲ್ಲ ಅನ್ನುವ ಸ್ಥಿತಿಯಿದೆ. ಮುಂದಿನ ದಿನಗಳಲ್ಲಿಯೂ ಈ ಬಗ್ಗೆ ಪ್ರತಿಭಟನೆ ನಡೆಸಲಾಗುವುದು ಎಂದರು.

ಪ್ರಧಾನ ಕಾರ್ಯದರ್ಶಿ ಸತೀಶ್ ಶೆಟ್ಟಿ ಮುಟ್ಲುಪ್ಪಾಡಿ ಮಾತನಾಡಿ ರಾಜ್ಯ ಸರಕಾರಿ ಗ್ಯಾರಂಟಿ ಹೆಸರಿನಲ್ಲಿ ಲಕ್ಷಾಂತರ ರೂ. ಲೂಟಿ ಮಾಡುತ್ತಿದೆ. ಸರಕಾರ ಆಡಳಿತ ಹಿಡಿದ 1 ವರ್ಷದ ಬಳಿಕ ಹಲವಾರು ಮಂದಿ ರೈತರ ಆತ್ಮಹತ್ಯೆ ಆಗಿದೆ ಎಂದರು.

Advertisement

ಈ ವೇಳೆ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next