Advertisement

BJP ಪ್ರತಿಭಟನೆ ವೇಳೆ ಅಸ್ವಸ್ಥ ;ಆಸ್ಪತ್ರೆಗೆ ದಾಖಲಾದ ಶಾಸಕ ಯತ್ನಾಳ್

06:43 PM Jul 19, 2023 | Team Udayavani |

ಬೆಂಗಳೂರು : ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ತೋರಿ, ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬುಧವಾರ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ ಬೆನ್ನಲ್ಲೇ ವಿಧಾನಸೌಧದಲ್ಲಿ ಹೈಡ್ರಾಮಾ ನಡೆದಿದೆ.

Advertisement

ಬಿಜೆಪಿ ಶಾಸಕರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಹಿರಿಯ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಅವರು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದು ಅವರನ್ನು ತತ್ ಕ್ಷಣ ಆಂಬುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯತ್ನಾಳ್ ಅವರ ಪತ್ನಿ ಶೈಲಜಮ್ಮ, ಪುತ್ರ ಹರ್ಷ ಅವರು ಆಸ್ಪತ್ರೆಗೆ ಆಗಮಿಸಿದ್ದಾರೆ. ಬಿಪಿ ಸಮಸ್ಯೆಯಿಂದ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next