ಹೊಸದಿಲ್ಲಿ : ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಕಡಿತಕ್ಕೆ ಆಗ್ರಹಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಶನಿವಾರ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ, ‘ಕೇಜ್ರಿವಾಲ್ ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಕಡಿತವನ್ನು ಘೋಷಿಸದ ಹೊರತು ಪಕ್ಷದ ಕಾರ್ಯಕರ್ತರು ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ’ ಎಂದು ಹೇಳಿದರು.
ಕೇಜ್ರಿವಾಲ್ ಸರಕಾರಕ್ಕೆ ಜನಸಾಮಾನ್ಯರ ಬಗ್ಗೆ ಕಾಳಜಿ ಇಲ್ಲ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಬಗ್ಗೆ ಅದು ಗಮನ ಹರಿಸುತ್ತಿಲ್ಲ ಎಂದು ಅವರು ಆರೋಪಿಸಿದರು.
ಬಿಜೆಪಿ ಆಡಳಿತವಿರುವ ರಾಜ್ಯಗಳು ಮತ್ತು ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಭಾರೀ ವ್ಯತ್ಯಾಸವಿದೆ. ದೆಹಲಿಯ ಆಪ್ ಸರಕಾರ ತಕ್ಷಣ ವ್ಯಾಟ್ ಕಡಿತ ಮಾಡಿ ಆದೇಶ ಹೊರಡಿಸಬೇಕು ಎಂದು ಗುಪ್ತಾ ಆಗ್ರಹಿಸಿದರು.
ಕೇಂದ್ರ ಸರಕಾರವು ಬುಧವಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 5 ರೂ ಮತ್ತು ಡೀಸೆಲ್ ಮೇಲೆ 10 ರೂ ಕಡಿತಗೊಳಿಸಿತ್ತು.
ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಈಗ 103.97 ರೂಪಾಯಿ ಆಗಿದೆ.