Advertisement

20ರಂದು ಬಿಜೆಪಿ ಬೃಹತ್‌ ಪ್ರತಿಭಟನೆ

01:23 PM Feb 18, 2017 | Team Udayavani |

ದಾವಣಗೆರೆ: ರಾಜ್ಯ ಸರ್ಕಾರದ ಭ್ರಷ್ಟಾಚಾರ, ಹಗರಣಗಳ ಸರಮಾಲೆ ವಿರೋಧಿಸಿ ಫೆ. 20 ರಂದು ಬೃಹತ್‌ ಪ್ರತಿಭಟನೆ ಹಮ್ಮಿಧಿ ಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್‌ ಜಾಧವ್‌ ತಿಳಿಸಿದ್ದಾರೆ.  ಸೋಮವಾರ ಬೆಳಗ್ಗೆ 11ಕ್ಕೆ ಪಕ್ಷದ ಜಿಲ್ಲಾ ಕಚೇರಿಯಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Advertisement

ರಾಜ್ಯದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯನವರು ಬೆಂಗಳೂರಿನಿಂದ ಬಳ್ಳಾರಿಯವರೆಗೆ ಪಾದಯಾತ್ರೆ ನಡೆಸಿದರು. ಭ್ರಷ್ಟಾಚಾರ, ಹಗರಣಗಳ ವಿರುದ್ಧ ನಿರಂತರ ಹೋರಾಟ ನಡೆಸುವುದಾಗಿ ವಿಧಾನ ಸೌಧದಲ್ಲೇ ತೊಡೆ ತಟ್ಟಿದ್ದರು. ಈಗ ಅದೇ ಸಿದ್ದರಾಮಯ್ಯನವರೇ ಖುದ್ದು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಉಡುಗಡೆಯಾಗಿ ಪಡೆದಿದ್ದ ದುಬಾರಿ ವಾಚ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡಾಫೆಯಾಗಿ ಉತ್ತರ ನೀಡಿದ್ದರು.

ಅದು ಉಡುಗರೆ ವಾಚ್‌ ಎಂಬುದಾಗಿ ಹೇಳಳು ಒಂದು ವಾರ ತೆಗೆದುಕೊಂಡರು ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮಂತ್ರಿ ಮಂಡಲ ದಲ್ಲಿರುವ ಸಚಿವ ರಮೇಶ್‌ ಜಾರಕಿಹೊಳಿ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಲಕ್ಷ್ಮಿ ಹೆಬ್ಟಾಳಕರ್‌, ಶಾಸಕ ಎಂ.ಟಿ.ಬಿ. ನಾಗರಾಜ್‌ ಮನೆ ಮೇಲೆ ನಡೆದ ಐಟಿ ದಾಳಿ ಸಂದರ್ಭದಲ್ಲಿ ಕೋಟ್ಯಾಂತರ ಮೊತ್ತದ ಅಕ್ರಮ ಆಸ್ತಿ ಪತ್ತೆಯಾಯಿತು. ಅವರ ಆಪ್ತ ಅಧಿಕಾರಿಧಿ ಗಳಾದ ಜಯಚಂದ್ರ, ಚಿಕ್ಕರಾಯಪ್ಪ ಬಳಿಯೂ ಅಕ್ರಮ ಆಸ್ತಿ ಪತ್ತೆಯಾದರೂ ಈವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ಒಂದು ಮಾತನಾಡಿಲ್ಲ.

ಕ್ರಮದ ಬಗ್ಗೆ ಅಪ್ಪಿತಪ್ಪಿಯೂ ಹೇಳಿಲ್ಲ. ಇದನೆಲ್ಲಾ ನೋಡಿದರೆ ಎಲ್ಲಿಯೋ ಒಂದು ಕಡೆ ಅವರೇ ಪ್ರತ್ಯಕ್ಷ ಸಹಕಾರ ಇದೆ ಎಂದೆನೆಸುತ್ತಿದೆ ಎಂದು ದೂರಿದರು. ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯನವರ ಸರ್ಕಾರ ಬರೀ ಹಗರಣದಲ್ಲಿ ಮುಳುಗಿದೆ. ಬರದಿಂದ ತತ್ತರಿಸಿರುವ ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ.   

1 ಸಾವಿರಕ್ಕೂ ಅಧಿಕ ರೈತರು ಆತ್ಮಹತ್ಯೆಗೆ ಒಳಗಾಗಿದ್ದರೂ ಒಬ್ಬ ರೈತರ ಮನೆಗೆ ಭೇಟಿ ನೀಡಿಲ್ಲ. ಯಾವುದೇ ಜಿಲ್ಲಾ ಉಸ್ತುವಾರಿ ಸಚಿವರು ಬರದ ಪರಿಸ್ಥಿತಿ ನಿರ್ವಹಣೆಯತ್ತ  ಗಮನ ನೀಡುತ್ತಿಲ್ಲ. ಸರ್ಕಾರ ಇಡೀರಾಜ್ಯವನ್ನು ಹಾಳುಕೊಂಪೆಯನ್ನಾಗಿ ಮಾಡುತ್ತಿದೆ. ಭ್ರಷ್ಟಾಚಾರ, ಹಗರಣದ ಸರ್ಕಾರ ತೊಲಗಿಸುವ ನಿಟ್ಟಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.  ಕೇಂದ್ರದ ಬಿಜೆಪಿ ಸರ್ಕಾರ ಕೇವಲ ಕಾಂಗ್ರೆಸ್‌ನವರನ್ನೇ ಗುರಿಯಾಗಿಟ್ಟುಕೊಂಡು ಐಟಿ ದಾಳಿ ನಡೆಸುತ್ತಿಲ್ಲ.

Advertisement

ಅಕ್ರಮ ಆಸ್ತಿ ಇದ್ದವರ ಮೇಲೆ ದಾಳಿ ನಡೆಸಲಾಗುತ್ತಿದೆ. ಬೇಕಾದಲ್ಲಿ ಬಿಜೆಪಿ ಮುಖಂಡರ ಬಗ್ಗೆಯೂ ಐಟಿ ಇಲಾಖೆಗೆ ಮಾಹಿತಿ ನೀಡಲಿ. ಬೇಡ ಎನ್ನುವರು ಯಾರು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ತಾಪಂ ಸದಸ್ಯ ಆಲೂರು ನಿಂಗರಾಜ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ. ರಮೇಶ್‌ನಾಯ್ಕ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಪಿ.ಸಿ. ಶ್ರೀನಿವಾಸ್‌, ವಕ್ತಾರ ಕೊಂಡಜ್ಜಿ ಜಯಪ್ರಕಾಶ್‌, ಕೆ. ಹೇಮಂತ್‌ ಕುಮಾರ್‌, ಎಚ್‌.ಎಸ್‌. ಲಿಂಗರಾಜ್‌, ಸೊಕ್ಕೆ ನಾಗರಾಜ್‌, ಎನ್‌. ರಾಜಶೇಖರ್‌, ಧನುಶ್‌, ಅರುಣ್‌ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next