Advertisement

Govt. ಕಾಂಗ್ರೆಸ್‌ನಿಂದ ಹಿಂದೂ ವಿರೋಧಿ ನಿಲುವು ಖಂಡಿಸಿ ಬಿಜೆಪಿ ಪ್ರತಿಭಟನೆ

12:10 AM Jan 30, 2024 | Team Udayavani |

ಮಂಗಳೂರು: ಅಯೋಧ್ಯೆ ಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ 500 ವರ್ಷಗಳ ಕನಸಾಗಿದ್ದು, ಈ ಸಂಭ್ರ ಮವನ್ನು ಇಡೀ ದೇಶವೇ ಸಂಭ್ರಮಿಸಿದೆ. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಹನುಮ ಧ್ವಜವನ್ನು ಹಾಕಲಾಗಿತ್ತು. ಆದರೆ ಕಾಂಗ್ರೆಸ್‌ ಸರಕಾರ ಅವಕಾಶ ನೀಡದೆ ಹಿಂದೂ ವಿರೋಧಿ ನಿಲುವು ಅನುಸರಿಸಿದೆ ಸ್ಪಷ್ಟ ಎಂದು ಬಿಜೆಪಿ ಮಂಗಳೂರು ವಿಭಾಗೀಯ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಹೇಳಿದರು.

Advertisement

ಮಂಡ್ಯದ ಧ್ವಜ ವಿವಾದಕ್ಕೆ ಸಂಬಂಧಿಸಿ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ವಿ ಪರಿಷತ್‌ ಸದಸ್ಯ ಪ್ರತಾಪ್‌ಸಿಂಹ ನಾಯಕ್‌ ಮಾತನಾಡಿ, ಧ್ವಜ ವಿವಾದ ಸೃಷ್ಟಿಸುವ ಮೂಲಕ ಕಾಂಗ್ರೆಸ್‌ ಸಣ್ಣತನ ವನ್ನು ಪ್ರದರ್ಶಿಸಿದೆ. ಇದನ್ನು ನೋಡಿ ಬಿಜೆಪಿ ಸುಮ್ಮನಿರದು ಎಂದರು.

ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷ ಸತೀಶ್‌ ಕುಂಪಲ ಮಾತನಾಡಿ, ಮನೆಮನೆ, ಗಲ್ಲಿಗಳಲ್ಲಿ ಹಿಂದೂ ಧ್ವಜ ಹಾಕುತ್ತೇವೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಜಿಲ್ಲಾ ಅಧ್ಯಕ್ಷ ಸತೀಶ್‌ ಕುಂಪಲ ಹೇಳಿದರು.
ಶಾಸಕರಾದ ವೇದವ್ಯಾಸ ಕಾಮತ್‌, ಡಾ| ವೈ. ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್‌, ಹರೀಶ್‌ ಪೂಂಜ, ಭಾಗೀರಥಿ ಮುರುಳ್ಯ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಜಿ.ಪಂ. ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ನಿಕಟಪೂರ್ವ ಜಿಲ್ಲಾಧ್ಯಕ್ಷ ಸುದರ್ಶನ ಎಂ., ರಾಜ್ಯ ಪ್ರಧಾನ ಕಾರ್ಯದರ್ಶಿ ಕ್ಯಾ| ಬೃಜೇಶ್‌ ಚೌಟ, ವಿಧಾನ ಪರಿಷತ್‌ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮನಪಾ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಮುಡಾ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರು ಮತ್ತಿತರರು ಉಪಸ್ಥಿತರಿದ್ದರು.

ಉಡುಪಿಯಲ್ಲಿ ಪ್ರತಿಭಟನೆ
ಉಡುಪಿ: ಮಂಡ್ಯದ ಘಟನೆಯನ್ನುಖಂಡಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್‌ ಕುಮಾರ್‌ ನೇತೃತ್ವದಲ್ಲಿ ಜಿಲ್ಲಾ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಬಳಿಕ ಜಿಲ್ಲಾಡಳಿತ ಮೂಲಕ ರಾಜ್ಯ ಸರಕಾರಕ್ಕೆ ಖಂಡನ ನಿರ್ಣಯದ ಮನವಿ ಸಲ್ಲಿಸಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next