Advertisement
ಶುಕ್ರವಾರ ನಗರದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಸಿಎಂ ಕುಮಾರಸ್ವಾಮಿ ಹಾಗೂ ರಾಜ್ಯದ ಮೈತ್ರಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಮಾತನಾಡಿ, ಬರಿ ಮೂವತ್ತು ಮತ್ತೂಂದು ಶಾಸಕರನ್ನು ಪಡೆದು ಜೆಡಿಎಸ್ ನಾಯಕರು ಕಾಂಗ್ರೆಸ್ ಜೊತೆ ಅಪವಿತ್ರ ಮೈತ್ರಿ ಮಾಡಿಕೊಂಡು ಅಧಿ ಕಾರಕ್ಕೆ ಬಂದಿರುವ ಸಿಎಂ ಕುಮಾರಸ್ವಾಮಿ ಮೈಮೇಲೆ ಪ್ರಜ್ಞೆ ಕಳೆದುಕೊಂಡು ಮಾತನಾಡುತ್ತಿದ್ದಾರೆ. ಅಧಿಕಾರದ ಮದದಲ್ಲಿ ಮನ ಬಂದಂತೆ ಮಾತನಾಡುತ್ತಿದ್ದಾರೆ. ಸಾಲದು ಎಂಬಂತೆ ರಾಜ್ಯದ ಜನರ ರಕ್ಷಣೆ ಮಾಡಬೇಕಾದ ಸಂವಿಧಾನ ಬದ್ಧವಾಗಿ ಪ್ರಮಾಣವಚನ ಸ್ವೀಕರಿಸಿ, ದಂಗೆ ಎಬ್ಬಿಸುವ ಮಾತನಾಡಿ ಸಂವಿಧಾನ ವಿರೋಧಿ ನೀತಿ ಅನುರಿಸುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು. ಮತ್ತೂಂದೆಡೆ ಕಾಂಗ್ರೆಸ್-ಜೆಡಿಎಸ್ ಗೂಂಡಾಗಳನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮನೆಗೆ ಕಳುಹಿಸಿ ಗಲಾಟೆ ಮಾಡಿಸಿದ್ದಾರೆ.
ಅವಲೋಕಿಸಿದರೆ ಅಪವಿತ್ರ ಮೈತ್ರಿ ಸರ್ಕಾರ ಬಹಳ ದಿನ ಆಯುಷ್ಯ ಇಲ್ಲ ಎಂಬುದು ಮನವರಿಕೆ ಆಗುತ್ತಿದೆ. ಇದರಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡು ಸರ್ಕಾರ ಉಳಿಯುವುದಿಲ್ಲ, ಬರುವ ದಿನಗಳಲ್ಲಿ ಕುಮಾರಸ್ವಾಮಿ ಅವರು ಇಂತಹ ಹೀನ ಕೃತ್ಯಗಳನ್ನು ಮಾಡುವುದನ್ನು ಬಿಡದಿದ್ದರೆ ಅವರ ವಿರುದ್ಧ ಮತ್ತು ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕಾಂತ ಬಗಲಿ ಮಾತನಾಡಿ, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕಾಯಬೇಕಾದ
ಜವಾಬ್ದಾರಿ ಸ್ಥಾನದಲ್ಲಿರುವ ಸಿಎಂ ಕುಮಾರಸ್ವಾಮಿ ಅವರೇ ಖುದ್ದು ಕಾನೂನು ಸುವ್ಯವಸ್ಥೆ ಹಾಳು ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ದೂರಿದರು.
Related Articles
Advertisement