Advertisement

 ದೀಪಕ್‌ ರಾವ್‌ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

12:45 PM Jan 05, 2018 | Team Udayavani |

ಬಂಟ್ವಾಳ: ಹಿಂದೂ ಸಂಘಟನೆಯ ಕಾರ್ಯಕರ್ತ, ಕಾಟಿಪಳ್ಳ ದಲ್ಲಿ ಹತ್ಯೆಯಾದ ಸ್ಥಳೀಯ ನಿವಾಸಿ ದೀಪಕ್‌ ರಾವ್‌ ಕುಟುಂಬಕ್ಕೆ ರಾಜ್ಯ ಸರಕಾರ 50 ಲಕ್ಷ ರೂ. ಪರಿಹಾರ ನೀಡಬೇಕು. ಅವರ ಕುಟುಂಬವನ್ನು ಮುಖ್ಯಮಂತ್ರಿ ಖುದ್ದು ಭೇಟಿಯಾಗಿ ಮನೆಯ ಪರಿಸ್ಥಿತಿಯನ್ನು ಅವಲೋಕಿಸಬೇಕು ಎಂದು ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ ಆಗ್ರಹಿಸಿದರು. ದೀಪಕ್‌ ಹತ್ಯೆ ವಿರುದ್ಧ ಗುರುವಾರ ಬಿ.ಸಿ. ರೋಡ್‌ ಬಸ್‌ ನಿಲ್ದಾಣದಲ್ಲಿ ಬಂಟ್ವಾಳ ಬಿಜೆಪಿ ಆಶ್ರಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

Advertisement

ಕುಟುಂಬದ ನಿರ್ವಹಣೆಯನ್ನು ಮಾಡುತ್ತಿದ್ದ ದೀಪಕ್‌ ಕೊಲೆಯಾದುದರಿಂದ ಆ ಕುಟುಂಬ ನಿರ್ಗತಿಕವಾಗಿದೆ.
ಈ ಕೃತ್ಯಕ್ಕೆ ನೇರ ಕಾರಣರಾದ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳನ್ನು ಸರಕಾರ ನಿಷೇಧಿಸಬೇಕು ಎಂದು ಆಗ್ರಹಿಸಿದರು. ಈ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರಾಷ್ಟ್ರೀಯ ತನಿಖಾ ದಳದ ಮೂಲಕ ತನಿಖೆ
ಮಾಡಬೇಕು ಎಂದು ಒತ್ತಾಯಿಸಿದರು. ಜನಸಾಮಾನ್ಯರಿಗೆ ರಕ್ಷಣೆ ಕೊಡುವ ಜವಾಬ್ದಾರಿ ಸರಕಾರಕ್ಕೆ ಇದೆ. ಮುಂದೆ ನಡೆಯುವ ಪ್ರತಿಭಟನೆ ಮತ್ತು ಕಷ್ಟ – ನಷ್ಟಗಳಿಗೆ ಸರಕಾರವೇ ನೇರ ಹೊಣೆಯಾಗುತ್ತದೆ ಎಂದು ಆರೋಪಿಸಿದರು.

ಜಿ.ಪಂ. ಸದಸ್ಯ ತುಂಗಪ್ಪ ಬಂಗೇರ, ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಚೆನ್ನಪ್ಪ ಆರ್‌. ಕೋಟ್ಯಾನ್‌, ದಿನೇಶ್‌ ಅಮೂrರು, ಜಿ. ಆನಂದ, ರಾಮ್‌ ದಾಸ ಬಂಟ್ವಾಳ, ಪ್ರಮೋದ್‌ ಕುಮಾರ್‌, ದಿನೇಶ್‌ ಭಂಡಾರಿ, ವಜ್ರನಾಥ ಕಲ್ಲಡ್ಕ, ಜನಾರ್ದನ ಬೊಂಡಾಲ, ಪುರುಷೋತ್ತಮ ಶೆಟ್ಟಿ, ರಮಾನಾಥ ರಾಯಿ, ಪ್ರದೀಪ್‌ ಅಜ್ಜಿಬೆಟ್ಟು ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next