Advertisement

ಎಂಬಿಪಿ ವಿರುದ್ಧ ಬಿಜೆಪಿ ಪ್ರತಿಭಟನೆ

01:14 PM May 07, 2019 | Team Udayavani |

ಕೊಪ್ಪಳ: ಗೃಹ ಸಚಿವ ಎಂ.ಬಿ. ಪಾಟೀಲ್ ಅವರು ಪತ್ರಕರ್ತರ ಮೇಲೆ ಶಿಸ್ತು ಕ್ರಮಕ್ಕೆ ಮುಂದಾಗಿ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಕ್ಷೇತ್ರವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಮಟ್ಟದ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Advertisement

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಡುತ್ತಿದೆ. ಮೈತ್ರಿ ಸರ್ಕಾರದಲ್ಲಿನ ಹಲವು ಶಾಸಕರು, ಮುಖಂಡರು ಮಾಧ್ಯಮ ಕ್ಷೇತ್ರ ಸೇರಿದಂತೆ ಕೆಲವು ವ್ಯಕ್ತಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ. ಜೆಡಿಎಸ್‌ ಶಾಸಕ ನಾರಾಯಣಗೌಡ ನಟ ಯಶ್‌, ದರ್ಶನ ಅವರಿಗೆ ಬೆದರಿಕೆ ಹಾಕಿದ್ದು, ಬೇಳೂರು ಗೋಪಾಲಕೃಷ್ಣ ಮೋದಿ ಹತ್ಯೆ ಮಾಡುವ ಮಾತನ್ನಾಡಿದ್ದು ಸೇರಿದಂತೆ ಹಲವು ಪ್ರಕರಣಗಳ ಕುರಿತು ಬಿಜೆಪಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಆದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನೂ ಮೈತ್ರಿ ಸರ್ಕಾರಕ್ಕೆ ಮಾಧ್ಯಮ ಕ್ಷೇತ್ರ ಸಿಂಹ ಸ್ವಪ್ನವಾಗಿದೆ. ರಾಜ್ಯ ಸರ್ಕಾರದ ಕುರಿತು ದಿನಕ್ಕೊಂದು ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದಕ್ಕೆ ಮಾಧ್ಯಮ ಪ್ರತಿನಿಧಿಗಳ ಬಗ್ಗೆ ಸಿಎಂ ಹಗುರವಾಗಿ ಮಾತನಾಡುತ್ತಿದ್ದಾರೆ. ಬಹಿಷ್ಕಾರ ಮಾಡುತ್ತಿದ್ದಾರೆ. ಇನ್ನೂ ಗೃಹ ಸಚಿವ ಎಂ.ಬಿ. ಪಾಟೀಲ್ ಅವರು ಲಿಂಗಾಯತ ಧರ್ಮದ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ಪತ್ರಕರ್ತರನ್ನು ಉದ್ದೇಶ ಪೂರ್ವಕವಾಗಿ ಬಂಧಿಸಿ ಕ್ರಮಕೈಗೊಳ್ಳಲು ಮುಂದಾಗುತ್ತಿದ್ದಾರೆ. ಅವರ ದಬ್ಟಾಳಿಕೆ ಮಿತಿ ಮೀರಿದೆ. ಸ್ವಾತಂತ್ರ್ಯ ಹರಣ ಮಾಡುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಕೂಡಲೇ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಬಿಜೆಪಿ ಮುಖಂಡರಾದ ಗವಿಸಿದ್ದಪ್ಪ ಕರಡಿ, ಚಂದ್ರು ಕವಲೂರು, ಶ್ರೀನಿವಾಸ ಪೂಜಾರ, ಗಿರಿಶಾನಂದ ಜ್ಞಾನಸುಂದರ್‌ ಸೇರಿ ಇತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next