Advertisement

ಮೇಯರ್‌ ವಿರುದ್ಧ  ಪಾಲಿಕೆ ಎದುರು ಬಿಜೆಪಿ ಪ್ರತಿಭಟನೆ 

12:33 PM Nov 01, 2017 | Team Udayavani |

ಮಹಾನಗರ: ಮಹಾನಗರ ಪಾಲಿಕೆ ಆಡಳಿತದ ಅವ್ಯವಸ್ಥೆ ಹಾಗೂ ಫ್ಲ್ಯಾಟ್‌ನ ವಾಚ್‌ಮೆನ್‌ ಪತ್ನಿ ಮೇಲೆ ನಡೆಸಿರುವ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿರುವ ಮೇಯರ್‌ ಆವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ತತ್‌ಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ಪಾಲಿಕೆ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

Advertisement

ಬಿಜೆಪಿ ಮಂಗಳೂರು ದಕ್ಷಿಣ ಕ್ಷೇತ್ರದ ಅಧ್ಯಕ್ಷ ವೇದವ್ಯಾಸ ಕಾಮತ್‌ ಮಾತನಾಡಿ, ಬಡವರ ಪರವಾಗಿಯೇ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಹೇಳಿ ಅಧಿಕಾರಕ್ಕೆ ಬಂದ ಮೇಯರ್‌ ಅಭಿವೃದ್ಧಿ ಕೆಲಸ ಮಾಡುವುದನ್ನು ಬಿಟ್ಟು ಪ್ರಚಾರಗಿಟ್ಟಿಸುವ ಕೆಲಸವನ್ನೇ ಮಾಡುತ್ತಿದ್ದಾರೆ. ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಬಡವರ ಮೇಲೆ ದಬ್ಟಾಳಿಕೆ ನಡೆಸಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಮನಪಾ ಸದಸ್ಯ ಸುಧೀರ್‌ ಶೆಟ್ಟಿ ಕಣ್ಣೂರು ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತಿವೆ. ನಗರದಲ್ಲಿ ನೂರಾರು ಮಸಾಜ್‌ ಸೆಂಟರ್‌ಗಳಿದ್ದರೂ ಕೆಲವು ಕೇಂದ್ರಗಳಿಗೆ ಮಾತ್ರವೇ ದಾಳಿ
ನಡೆಸುತ್ತಿದ್ದಾರೆ. 20 ಸಾವಿರಕ್ಕೂ ಅಧಿಕ ಅನಧಿಕೃತ ನೀರಿನ ಸಂಪರ್ಕ ಇದ್ದರೂ ಒಂದು ಅಪಾರ್ಟ್‌ಮೆಂಟ್‌ಗೆ ದಾಳಿ
ನಡೆಸಿ ಪ್ರಚಾರ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.

ಮಾಜಿ ಮೇಯರ್‌ ಗಣೇಶ್‌ ಹೊಸಬೆಟ್ಟು, ವಿಧಾನ ಪರಿಷತ್‌ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮಾಜಿ ಮೇಯರ್‌ ರಜನಿ ದುಗ್ಗಣ್ಣ, ಮೀನುಗಾರಿಕೆ ನಿಗಮದ ಮಾಜಿ ಅಧ್ಯಕ್ಷ ನಿತಿನ್‌ ಕುಮಾರ್‌, ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಹಿಳಾ ಮೋರ್ಚಾ ಅಧ್ಯಕ್ಷೆ ಪೂಜಾ ಪೈ, ಮನಪಾ ಸದಸ್ಯೆ ರೂಪಾ ಡಿ. ಬಂಗೇರ, ಕ್ಯಾ| ಬ್ರಿಜೇಶ್‌ ಚೌಟ, ಜಿಪಂ ಮಾಜಿ ಉಪಾಧ್ಯಕ್ಷ ಸತೀಶ್‌ ಕುಂಪಲ, ಸಂಜಯ್‌ ಪ್ರಭು, ವಸಂತ ಪೂಜಾರಿ, ಸಂತೋಷ್‌ ಉಳ್ಳಾಲ್‌ ಮೊದಲಾದವರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next