Advertisement

ಪರಿಹಾರಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

03:46 PM Oct 28, 2017 | Team Udayavani |

ಗುರುಮಠಕಲ್‌: ಕಳೆದ ಎರಡು ವಾರಗಳಿಂದ ಸುರಿದ ಮಳೆಯಿಂದ ಬೆಳೆ ಹಾನಿ ಅನುಭವಿಸಿದ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಗುರುಮಠಕಲ್‌ ಮತಕ್ಷೇತ್ರದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಇಲ್ಲಿನ ಗಾಂಧಿ ಮೈದಾನದಿಂದ ವಿಶೇಷ ತಹಶೀಲ್ದಾರ ಕಚೇರಿ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ ವಿಶೇಷ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

Advertisement

ಪ್ರತಿಭಟನೆ ನೇತೃತ್ವ ವಹಿಸಿದ್ದ ಗುರುಮಠಕಲ್‌ ಮತಕ್ಷೇತ್ರದ ಬಿಜೆಪಿ ಹಿರಿಯ ಮುಂಖಡ ಹಾಗೂ ಮತಕ್ಷೇತ್ರದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಸಾಯಿಬಣ್ಣ ಬೋರಬಂಡಾ ಮಾತನಾಡಿ, ಗುರುಮಠಕಲ್‌ ಮತಕ್ಷೇತ್ರದಲ್ಲಿ ಕಳೆದ ಎರಡು ವಾರಗಳಿಮದ ಸುರಿದ ಮಳೆಯಿಂದ ಬೆಳೆ ಸಂಪೂರ್ಣ ನಷ್ಟವಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲ್ಲಿಲ್ಲ ಎನ್ನುವ ಹಾಗಾಗಿದೆ. ರೈತರ ಪರಿಸ್ಥಿತಿ. ಆದ್ದರಿಂದ ಸರಕಾರ ಗಮನಹರಿಸಿ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 20 ಸಾವಿರ ರೂ. ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು. 

ಜಿಲ್ಲಾ ಉಪಾಧ್ಯಕ್ಷ ಡಾ| ಭೀಮಣ್ಣ ಮೇಟಿ ಮಾತನಾಡಿ, ಕ್ಷೇತ್ರದ ಶಾಸಕ ಬಾಬುರಾವ ಚಿಂಚನಸೂರ ಅವರು ರೈತರ ಹಿತಕಾಪಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಶಾಸಕರು ಮತ್ತು ಉಸ್ತುವಾರಿ ಸಚಿವರು ನಷ್ಟಕ್ಕೆ ಒಳಗಾದ ರೈತರಿಗೆ ಶೀಘ್ರವೇ ಪರಿಹಾರ ಕಲ್ಪಿಸಿಕೊಡಲು ಮುಂದಾಗಬೇಕು. ಒಂದು ವೇಳೆ ಪರಿಹಾರ ವಿತರಣೆಯಲ್ಲಿ ವಿಳಂಬವಾದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ರಾಜ್ಯ ಉಪಾಧ್ಯಕ್ಷೆ ನಾಗರತ್ನ ಕುಪ್ಪಿ, ರಾಜ್ಯ ಯುವ ಉಪಾಧ್ಯಕ್ಷ ರವೀಂದ್ರ ರಡ್ಡಿ, ಜಿಪಂ ಮಾಜಿ ಸದಸ್ಯರಾದ ದೇವರಾಜ ನಾಯಕ, ವೆಂಕಟರೆಡ್ಡಿ ಅಬ್ಬೆತುಮಕುರ, ಬ್ಲಾಕ್‌ ಅಧ್ಯಕ್ಷ ನರಸಿಂಹುಲು ನಿರೇಟಿ, ಬ್ಲಾಕ್‌ ಮಾಜಿ ಅಧ್ಯಕ್ಷ ಕೆ. ದೇವದಾಸ, ಚಂದ್ರಶೇಖರ ವಕೀಲರು, ಶರಣಗೌಡ ಹತ್ತಿಕುಣಿ, ಹಳ್ಳೆಪ್ಪ, ವಿಜಯಕುಮಾರ, ಹಣ್ಮೆಶ ಜೈಗ್ರಾಂ, ಬಸವರಾಜ, ರಾಜೇಶ ಜೈನ್‌, ಲಕ್ಷ್ಮಣ ಆಶನಾಳ, ಅಬ್ದುಲ್‌,
ವೆಂಕಟರೆಡ್ಡಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ನೀರಾವರಿ ಹೋರಾಟ ಸಮಿತಿ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next