Advertisement

ಬೇಡಿಕೆ ಈಡೇರಿಕೆಗೆ ಬಿಜೆಪಿ ಪ್ರತಿಭಟನೆ

03:26 PM Oct 10, 2017 | |

ಮಾನ್ವಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬಿಜೆಪಿ ನಗರ ಘಟಕದ ವತಿಯಿಂದ ಪಟ್ಟಣದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಮಿತಿ ಸದಸ್ಯ ಎನ್‌. ಶಂಕ್ರಪ್ಪ, ಸ್ವತ್ಛ ಭಾರತ, ಕುಡಿಯುವ ನೀರು, ಶೌಚಾಲಯ ನಿರ್ಮಾಣ, ಅಕ್ಕಿ ವಿತರಣೆಗಾಗಿ ಕೇಂದ್ರದಿಂದ ಸಾವಿರಾರು ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಆದರೆ ರಾಜ್ಯ ಸರ್ಕಾರ ಜನರಿಗೆ ಅನುದಾನ ತಲುಪಿಸದೆ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.

Advertisement

ತಾಲೂಕಿನಲ್ಲಿ ನೂರಾರು ಸಮಸ್ಯೆಗಳಿವೆ. ಕಳೆದ 20ವರ್ಷಗಳಿಂದ ಕಾಂಗ್ರೆಸ್‌ ಶಾಸಕರು ಆಡಳಿದ ನಡೆಸುತ್ತಿದ್ದಾರೆ. ಆದರೆ ತಾಲೂಕಿನಲ್ಲಿ ಆಡಳಿತ ವ್ಯವಸ್ಥೆ ನಿಷ್ಕ್ರಿಯವಾಗಿದೆ. ಜನರಿಗೆ ಸ್ಪಂದನೆ ಸಿಗುತ್ತಿಲ್ಲ. ಕುಡಿಯುವ ನೀರು ಇಲ್ಲ. ಶೌಚಾಲಯ ನಿರ್ಮಾಣಕ್ಕೆ ಸಹಾಯಧನ ನೀಡುತ್ತಿಲ್ಲ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ಮನೆಗೆ ನುಗ್ಗುತ್ತಿವೆ. ಈ ಕುರಿತು ಪುರಸಭೆ ಸ್ಪಂದಿಸುತ್ತಿಲ್ಲ. ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುತ್ತಿಲ್ಲ ಎಂದು ದೂರಿದರು.

ವರ್ಗಾವಣೆಗೆ ಒತ್ತಾಯ: ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು. ಕಳೆದ 15 ವರ್ಷಗಳಿಂದ ಇಲ್ಲೆ ಇರುವ ವೆಂಕಟೇಶ ಏಕೆ ವರ್ಗ ಆಗುತ್ತಿಲ್ಲ. ಅನುದಾನ ಬಳಕೆಯಲ್ಲಿ ಅಕ್ರಮ ಎಸಗುತ್ತಿದ್ದಾರೆ. ಅಲ್ಲದೆ ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕುಡಿಯುವ ನೀರು ಸೇರಿದಂತೆ ತಾಲೂಕ ಮತ್ತು ಪಟ್ಟಣದ ವಿವಿಧ ಬೇಡಿಕೆಗಳಿಗಾಗಿ ನಿಜೆಪಿ ನಗರ ಘಟಕದ ಅಧ್ಯಕ್ಷ ಬಸನಗೌಡ ಚೀಕಲಪರ್ವಿ ನೇತೃತ್ವದಲ್ಲಿ ಹಮ್ಮಿಕೊಂಡಿದ ಪ್ರತಿಭಟನೆ ಮತ್ತು ಬಂದ್‌ಗೆ ಪಟ್ಟಣದಲ್ಲಿ ಭಾರಿ ಪ್ರಮಾಣದಲ್ಲಿ ಬೆಂಬಲ ವ್ಯಕ್ತವಾಯಿತು. ಬೆಳಗ್ಗೆಯಿಂದಲೇ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ವ್ಯಾಪಾರಸ್ಥರು ಬೆಂಬಲ ವ್ಯಕ್ತಪಡಿಸಿದರು. ಸುಮಾರು ಮೂರು ಸಾವಿನ ಜನಸಂಖ್ಯೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಬವಸವೃತ್ತದಲ್ಲಿ ರಸ್ತೆ ತಡೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ಶರಣಪ್ಪಗೌಡ ಜಾಡಲದಿನ್ನಿ, ತಾಲೂಕು ಅಧ್ಯಕ್ಷ ಶರಣಪ್ಪಗೌಡ ನಕ್ಕುಂದಿ, ನಗರ ಘಟಕಾಧ್ಯಕ್ಷ ಬಸನಗೌಡ ಚೀಕಲಪರ್ವಿ, ಬಿಜೆಪಿ ಮುಖಂಡರಾದ ಮಾಜಿ ಶಾಸಕ ಗಂಗಾಧರ ನಾಯಕ, ಉಮೇಶ ಸಜ್ಜನ, ಎ. ಬಾಲಸ್ವಾಮಿ ಕೊಡ್ಲಿ, ಶರಣಯ್ಯಸ್ವಾಮಿ, ಚಂದ್ರು ಜಾನೇಕಲ್‌, ವೆಂಕಟೇಶ ಕೋನಾಪುರಪೇಟೆ, ವೀರೇಶ ನಾಯಕ, ಬಸವರಾಜ ನಕ್ಕುಂದಿ, ಮಂಜುನಾಥ ನಾಯಕ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next