Advertisement

ಎಸಿಬಿ ದುರ್ಬಳಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

12:44 PM Aug 22, 2017 | Team Udayavani |

ಮೈಸೂರು: ಶಿವರಾಮಕಾರಂತ ಬಡಾವಣೆ ಡಿನೋಟಿಫಿಕೇಶನ್‌ ಪ್ರಕರಣದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಸಿಲುಕಿಸಲು ರಾಜ್ಯ ಸರ್ಕಾರ ಹುನ್ನಾರ ನಡೆಸಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಘಟಕದವತಿಯಿಂದ ಪ್ರತಿಭಟನೆ ನಡೆಸಲಾಯಿತು. 

Advertisement

ಜಿಲ್ಲಾ ಬಿಜೆಪಿ ಅಧ್ಯಕ್ಷ ಕೋಟೆ ಎಂ.ಶಿವಣ್ಣ ನೇತೃತ್ವದಲ್ಲಿ ಗಾಂಧಿ ಚೌಕದ ಗಾಂಧಿ ಪ್ರತಿಮೆ ಬಳಿ ಸೇರಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ರಾಜ್ಯ ಕಾಂಗ್ರೆಸ್‌ ಸರ್ಕಾರ ರಾಜಕೀಯ ದುರುದ್ದೇಶದಿಂದ ಶಿವರಾಮಕಾರಂತ ಬಡಾವಣೆ ಡಿನೋಟಿಪೀಕೇಶನ್‌ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಸಿಲುಕಿಲು ಮುಂದಾಗಿದೆ. 

ಎಸಿಬಿ ಅಧಿಕಾರಿಗಳೇ ಯಡಿಯೂರಪ್ಪ ಅವರ ಹೆಸರು ಹೇಳುವಂತೆ ತಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಸ್ವತಃ ಗಣಿ ಮತ್ತು ಭೂ ವಿಜಾnನ ಇಲಾಖೆ ತನಿಖಾ ದಳದ ಉಪ ಕಾರ್ಯದರ್ಶಿ ಬಸವರಾಜೇಂದ್ರ ಹೇಳಿರುವುದರಿಂದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೋಟೆ ಎಂ.ಶಿವಣ್ಣ ಒತ್ತಾಯಿಸಿದರು.

ಎಸಿಬಿ ರಚಿಸಿ, ಲೋಕಾಂ‌ುುಕ್ತದ ಕತ್ತು ಹಿಸುಕಿದ ಸರ್ಕಾರ, 2010ರ ಡಿನೋಟಿಫಿಕೇಶನ್‌ ಪ್ರಕರಣದಲ್ಲಿ ಯಡಿಯೂರಪ್ಪ ಅವರು ನಿರ್ದೋಷಿ ಎಂದು ಸಾಬೀತಾದ ಮೇಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ಯಡಿಯೂರಪ್ಪ ಅವರನ್ನು  ಸಿಕ್ಕಿ ಹಾಕಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ಮುಖಂಡರಾದ ಮಹದೇವಯ್ಯ, ರಾಜೇಶ್‌, ಅಶೋಕ, ಸಹ ಪ್ರಬಾರಿ ಪಣೀಶ್‌ ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಬಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next