Advertisement
ಪ್ರತಿಭಟನ ರ್ಯಾಲಿಯಲ್ಲಿ ಕಾಂಗ್ರೆಸ್, ಜೆಡಿಎಸ್‌ನ ಪ್ರಭಾವಿ ನಾಯಕರು, ಪ್ರಮುಖ ಸ್ವಾಮೀಜಿಗಳ ಗೈರು ಹಾಜರಿಯನ್ನು ಗಮನಿಸಿರುವ ರಾಜ್ಯ ಬಿಜೆಪಿ ನಾಯಕರು ಈ ವಿಚಾರಕ್ಕೆ ಹೆಚ್ಚಿನ ಮಹತ್ವ ನೀಡದಿರಲು ತೀರ್ಮಾನಿಸಿದ್ದಾರೆ. ಆ ಮೂಲಕ ಪಕ್ಷದ ವರ್ಚಸ್ಸಿಗೆ ಯಾವುದೇ ರೀತಿಯ ಚ್ಯುತಿ ಬಾರದಂತೆ ಎಚ್ಚರಿಕೆಯ ನಡೆ ಅನುಸರಿಸಲು ಮುಂದಾದಂತಿದೆ.
Related Articles
Advertisement
ಬಿಜೆಪಿಗರಿಂದ ಪ್ರತಿ ಹೇಳಿಕೆಬಿಜೆಪಿ ರಾಷ್ಟ್ರೀಯ ನಾಯಕರ ವಿರುದ್ಧ ವಿಪಕ್ಷಗಳ ನಾಯಕರು ಆರೋಪ ಮಾಡುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಸೂಚನೆಯಂತೆ ಬಿಜೆಪಿಯ ಒಕ್ಕಲಿಗ ನಾಯಕರು ತುಟಿ ಬಿಚ್ಚಲಾರಂಭಿಸಿದರು. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಉಪಮುಖ್ಯಮಂತ್ರಿ ಡಾ| ಸಿ.ಎನ್.ಅಶ್ವತ್ಥ ನಾರಾಯಣ, ಸಚಿವರಾದ ಆರ್.ಅಶೋಕ್, ಸಿ.ಟಿ.ರವಿ ಅವರು ಪ್ರತಿ ಹೇಳಿಕೆ ನೀಡಿ ಡಿ.ಕೆ.ಶಿವಕುಮಾರ್ ಬಂಧನಕ್ಕೂ ಬಿಜೆಪಿಗೂ ಸಂಬಂಧವಿಲ್ಲ ಎಂಬುದನ್ನು ಪುನರುಚ್ಚರಿಸಿದರು. ಅದರಲ್ಲೂ ಡಾ| ಸಿ.ಎನ್.ಅಶ್ವತ್ಥ ನಾರಾಯಣ ಅವರು ತೀವ್ರ ವಾಗ್ಧಾಳಿ ನಡೆಸಿ ಪಕ್ಷದ ಪರ ನಿಂತರು. ತಟಸ್ಥ ಧೋರಣೆ
ಡಿ.ಕೆ.ಶಿವಕುಮಾರ್ ಬಂಧನ ಮತ್ತು ಅನಂತರದ ಬೆಳವಣಿಗೆಗೆ ಸಂಬಂಧಪಟ್ಟಂತೆ ಸದ್ಯ ತಟಸ್ಥ ಧೋರಣೆ ಮುಂದುವರಿಸಲಾಗುವುದು. ಬಂಧನ ಖಂಡಿಸಿ ನಡೆದ ಪ್ರತಿಭಟನೆಯಿಂದ ಕಾಂಗ್ರೆಸ್, ಜೆಡಿಎಸ್‌ನ ಹಿರಿಯ ನಾಯಕರು ಅಂತರ ಕಾಯ್ದುಕೊಂಡಿದ್ದಾರೆ. ಜತೆಗೆ ಸಮುದಾಯದ ಪ್ರಮುಖ ಸ್ವಾಮೀಜಿಗಳು, ರಾಜ್ಯ ಒಕ್ಕಲಿಗ ಸಂಘವೂ ದೂರ ಉಳಿದಿದೆ. ಒಕ್ಕಲಿಗ ಸಮುದಾಯದಲ್ಲೂ ಈ ಬಗ್ಗೆ ಭಿನ್ನ ನಿಲುವಿದೆ. ಹಾಗಾಗಿ ಈ ಬೆಳವಣಿಗೆಯಿಂದ ಪಕ್ಷದ ವರ್ಚಸ್ಸಿಗೆ ಯಾವುದೇ ಹಾನಿಯಾಗದು ಎಂದು ರಾಜ್ಯ ಬಿಜೆಪಿ ಪದಾಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಜನರಿಗೆ ವಾಸ್ತವದ ಅರಿವಿದೆ
ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಪಟ್ಟ ಕಾನೂನಾತ್ಮಕ ವಿಚಾರಗಳಲ್ಲಿ ರಾಜಕೀಯ, ಜಾತಿ ತರುವುದು ಸರಿಯಲ್ಲ. ಬದಲಿಗೆ ಕಾನೂನಾತ್ಮಕ ಹೋರಾಟ ಮಾಡಬೇಕು. ಈ ರೀತಿಯ ಒತ್ತಡಗಳಿಗೆ ಯಾರೂ ಬಗ್ಗುವುದಿಲ್ಲ. ಹಿಂದೆಯೂ ಸಾಕಷ್ಟು ಮಂದಿಯ ಬಂಧನ, ವಿಚಾರಣೆಯಾಗಿದೆ. ಅದಕ್ಕೆಲ್ಲ ಹಿಂದಿನ ಪ್ರಧಾನಿಗಳು ಇತರ ನಾಯಕರ ಮೇಲೆ ಆರೋಪ ಹೊರಿಸುವುದು ಸರಿ ಎನಿಸದು. ಜನರು ಮೂರ್ಖರಲ್ಲ. ಜನರಿಗೆ ವಾಸ್ತವದ ಅರಿವಿದೆ. ಈ ರೀತಿಯ ವಿಚಾರಗಳಲ್ಲಿ ಕೇಂದ್ರದ ನಾಯಕರು, ಸರಕಾರದ ವಿರುದ್ಧ ಆರೋಪ ಮಾಡಿದರೆ ಪಕ್ಷದ ವರ್ಚಸ್ಸಿಗೆ ಯಾವುದೇ ರೀತಿಯಲ್ಲಿ ಧಕ್ಕೆಯಾಗದು.
– ನಳಿನ್ ಕುಮಾರ್ ಕಟೀಲು, ಬಿಜೆಪಿ ರಾಜ್ಯಾಧ್ಯಕ್ಷ