Advertisement

ಇಂದಿನಿಂದ ಬಿಜೆಪಿ ರೈತ ಮೋರ್ಚಾ ಸಮಾವೇಶ

08:00 PM Jan 28, 2023 | Team Udayavani |

ಬೆಂಗಳೂರು: ಬೆಳಗಾವಿಯಲ್ಲಿ ರವಿವಾರ ಮತ್ತು ಸೋಮವಾರ (ಜ. 29 ಮತ್ತು 30) ಬಿಜೆಪಿ ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದ್ದಾರೆ.

Advertisement

ರವಿವಾರ ಮಧ್ಯಾಹ್ನ 12 ಗಂಟೆಗೆ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದು, ರಾಷ್ಟ್ರೀಯ ರೈತ ಮೋರ್ಚಾದ ಅಧ್ಯಕ್ಷ ರಾಜಕುಮಾರ ಚಹರ್‌ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಸಚಿವರಾದ ಶಶಿಕಲಾ ಜೊಲ್ಲೆ, ರಾಜ್ಯದ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಮಂಗಲಾ ಅಂಗಡಿ, ಶಾಸಕರಾದ ಅನಿಲ್‌ ಬೆನಕೆ, ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ್‌, ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್‌ ಪಾಲ್ಗೊಳ್ಳುವರು. ಅಲ್ಲದೆ ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ಪರಿಷತ್‌ ಸದಸ್ಯರು ಹಾಗೂ ಮಾಜಿ ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

30ರಂದು ಸೋಮವಾರ ಮಧ್ಯಾಹ್ನ 12.30ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ನಡೆಯಲಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್ . ಸಂತೋಷ್‌ ಸಮಾರೋಪ ಭಾಷಣ ಮಾಡಲಿದ್ದಾರೆ. ಕೃಷಿ ಸಚಿವ ಬಿ.ಸಿ.ಪಾಟೀಲ್‌ ಮುಖ್ಯ ಅತಿಥಿಗಳಾಗಿರುವರು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next